ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಫಿರ್ಹಾದ್ ಹಕೀಮ್ ಅವರು ತಮ್ಮ ಕೋಲ್ಕತ್ತಾ ಮಹಾನಗರ ಪಾಲಿಕೆಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.
ತಮ್ಮ ಸೇವಾ ಅವಧಿ ಮುಗಿದ ಬಳಿಕವೂ ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆಗಳ ಆಡಳಿತಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ರಾಜಕಾರಣಿಗಳು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವವರೆಗೂ ತಮ್ಮ ಅಧಿಕಾರ ಚಲಾಯಿಸುವಂತಿಲ್ಲ ಎಂದು ಭಾರತದ ಚುನಾವಣಾ ಆಯೋಗ (ಇಸಿಐ) ನಿರ್ಬಂಧಿಸಿ ಆದೇಶ ನೀಡಿದ ಬೆನ್ನಲ್ಲೇ ಫಿರ್ಹಾದ್ ಹಕೀಮ್ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಪ. ಬಂಗಾಳ; ಟಿಎಂಸಿ ಕಾರ್ಯಕರ್ತ ಸಾವು.. ಬಿಜೆಪಿ ವಿರುದ್ಧ ಕೊಲೆ ಆರೋಪ
ಚುನಾವಣೆ ಸಮಯದಲ್ಲಿ ನ್ಯಾಯ ಮತ್ತು ನಿಷ್ಪಕ್ಷಪಾತದ ಬಗ್ಗೆ ಮತದಾರರ ಮನಸ್ಸಿನಲ್ಲಿ ಯಾವುದೇ ಅನುಮಾನಗಳು ಹುಟ್ಟದಿರಲಿ ಎಂಬ ಕಾರಣಕ್ಕೆ ಈ ನಿರ್ಬಂಧ ಹೇರಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮಾರ್ಚ್ 27 ರಿಂದ ಏಪ್ರಿಲ್ 29ರ ವರೆಗೆ 294 ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.