ETV Bharat / bharat

51ನೇ ವಸಂತಕ್ಕೆ ಕಾಲಿಟ್ಟ ರಾಹುಲ್​ ಗಾಂಧಿ.. ಗಣ್ಯರಿಂದ ಶುಭಾಶಯಗಳ ಸುರಿಮಳೆ..! - ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಕಾಂಗ್ರೆಸ್‌ನ ಭರವಸೆಯ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಂದು ಜನುದಿನದ ಸಂಭ್ರಮ. 51ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ರಾಹುಲ್‌ ಗಾಂಧಿ ಅವರಿಗೆ ಪಕ್ಷಾತೀತವಾಗಿ ನಾಯಕರು ಶುಭಾಶಯಗಳನ್ನ ಕೋರಿದ್ದಾರೆ..

Rahul Gandhi
ರಾಹುಲ್​ ಗಾಂಧಿ
author img

By

Published : Jun 19, 2021, 4:43 PM IST

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 51ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಂಸದ ಶಶಿ ತರೂರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶುಭ ಹಾರೈಸಿದ್ದಾರೆ.

‘ನಮ್ಮ ನಾಯಕ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರ ಸತ್ಯಸಂಧತೆ, ನ್ಯಾಯನಿಷ್ಠುರತೆ ಮತ್ತು ರಾಜಿ ಇಲ್ಲದ ಜನಪರ ಕಾಳಜಿಯ ಗುಣಗಳು ಖಂಡಿತ ಫಲ ನೀಡಲಿವೆ.‌ ನಿಮ್ಮ ಹೋರಾಟದ ಹಾದಿಯಲ್ಲಿ ಸದಾ ಹೆಜ್ಜೆ ಹಾಕುವ ಶಪಥದೊಂದಿಗೆ ನಿಮಗೆ ಹುಟ್ಟು ಹಬ್ಬದ ಪ್ರೀತಿಯ ಶುಭಾಶಯಗಳು’ ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಆರೋಗ್ಯ, ಸಂತಸ ಮತ್ತು ಯಶಸ್ಸಿಗಾಗಿ ಶುಭ ಹಾರೈಕೆಗಳು. ಪ್ರತಿಕೂಲ ಸಮಯದಲ್ಲಿ ಜನಸಾಮಾನ್ಯರ ಧ್ವನಿಯಾಗಿ ಅವರೊಂದಿಗೆ ನಿಂತು ಅವರ ಹಕ್ಕುಗಳಿಗಾಗಿ ಹೋರಾಡುವ ನಿಮ್ಮ ಕಾರ್ಯ ಮುಂದುವರಿಯಲಿ. ಹುಟ್ಟುಹಬ್ಬದ ಶುಭಾಶಯ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರು ಮಾನವೀಯ ಮತ್ತು ಅಂತರ್ಗತ ಸಮಾಜಕ್ಕೆ ಬದ್ಧವಾಗಿರುವ ಉತ್ತಮ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಇಂದು ಅವರ ಜನ್ಮದಿನ, ಅವರು ನೂರ್ಕಾಲ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕರುಣಿಸಲಿ’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ನನ್ನ ಪ್ರೀತಿಯ ಸಹೋದರ ರಾಹುಲ್ ಗಾಂಧಿಯವರಿಗೆ ಜನ್ಮದಿನದ ಶುಭಾಶಯಗಳು. ಸಮತಾವಾದಿ ಭಾರತವನ್ನು ನಿರ್ಮಿಸಲು ಅವರ ನಿಸ್ವಾರ್ಥ, ಅವಿರತ ಕಾರ್ಯ ಮುಂದುವರಿಯಲಿ, ಅವರಿಗೆ ಸದಾ ನಮ್ಮ ಬೆಂಬಲವಿರುತ್ತದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್​ ತಿಳಿಸಿದ್ದಾರೆ.

‘ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮುಂದಿನ ವರ್ಷ ಸಂತಸದಿಂದ ಕೂಡಿರಲಿ’ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

‘ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ದೀರ್ಘಾಯುಷ್ಯ ಕರುಣಿಸಲಿ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.