ETV Bharat / bharat

ಹೆಲಿಕಾಪ್ಟರ್​ ದುರಂತದಲ್ಲಿ ಬದುಕುಳಿದ ಕ್ಯಾ. ವರುಣ್​​ ಸಿಂಗ್​​.. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ - ವರುಣ್​ ಸಿಂಗ್​​ ಬೆಂಗಳೂರಿಗೆ ಸ್ಥಳಾಂತರ

ಸೇನಾ ಹೆಲಿಕಾಪ್ಟರ್​​ ಅಪಘಾತದಲ್ಲಿ ಬದುಕುಳಿದಿರುವ ಕ್ಯಾಪ್ಟನ್​ ವರುಣ್​ ಸಿಂಗ್​​​ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಈಗಾಗಲೇ ವರುಣ್​ ಅವರು ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Captain Varun Singh
Captain Varun Singh
author img

By

Published : Dec 9, 2021, 4:18 PM IST

Updated : Dec 9, 2021, 4:59 PM IST

ಚೆನ್ನೈ(ತಮಿಳುನಾಡು): ತಮಿಳುನಾಡಿನ ನೀಲಿಗಿರಿಯಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಐಎಎಫ್​​ ಗ್ರೂಪ್ ಕ್ಯಾಪ್ಟನ್​​ ವರುಣ್​​ ಸಿಂಗ್​​ ಬದುಕುಳಿದಿದ್ದು, ಹೆಚ್ಚುವರಿ ಚಿಕಿತ್ಸೆಗಾಗಿ ಅವರನ್ನ ತಮಿಳುನಾಡಿನ ವೆಲ್ಲಿಂಗ್ಟನ್​​ ಆಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್​ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ನಡೆದ ಹೆಲಿಕಾಪ್ಟರ್​​ ದುರಂತದಲ್ಲಿ ಸೇನಾ ಮುಖಂಡ ಬಿಪಿನ್​ ರಾವತ್​​ ಅವರ ಪತ್ನಿ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿದ್ದು, ಕ್ಯಾಪ್ಟನ್​ ವರುಣ್​ ಸಿಂಗ್ ಬದುಕುಳಿದಿದ್ದಾರೆ. ಈಗಾಗಲೇ ತಮಿಳುನಾಡಿನ ವೆಲ್ಲಿಂಗ್ಟನ್​​ ಮಿಲಿಟರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ವರುಣ್​​ ಸಿಂಗ್​​ ಅವರನ್ನ ಬೆಂಗಳೂರಿನ ಆಸ್ಪತ್ರೆಗೆ ರವಾನೆ

ಲೈಫ್​​ ಸಪೋರ್ಟ್​​ ವ್ಯವಸ್ಥೆಯಲ್ಲಿರುವ ವರುಣ್​ ಸಿಂಗ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಮುಂದಿನ 48 ಗಂಟೆಗಳ ಅವಧಿ ನೀಡಿದ್ದಾರೆ. ಇದರ ಬೆನ್ನಲ್ಲೇ ಅವರನ್ನ ಬೆಂಗಳೂರಿನ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವರುಣ್​ ಸಿಂಗ್​ ಅವರ ತಂದೆ ಕೆಪಿ ಸಿಂಗ್​​, ಈಗಾಗಲೇ ತಾವು ವೆಲ್ಲಿಂಗ್ಟನ್​ ತಲುಪಿದ್ದು, ಮಗನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡುತ್ತಿರುವ ಮಾಹಿತಿ ಖಚಿತಪಡಿಸಿದ್ದಾರೆ. ಆದರೆ, ಮಗನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಲು ಅವರು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿರಿ: Chopper Crash: ಯೋಧರ ಪಾರ್ಥಿವ ಶರೀರ ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್​ ಅಪಘಾತ

ಸುಲೂರು ಏರ್​ಬೇಸ್​ನಿಂದ ರವಾನೆ

ಹೆಲಿಕಾಪ್ಟರ್​​ ಅಪಘಾತದಲ್ಲಿ ಗಾಯಗೊಂಡಿರುವ ಕ್ಯಾಪ್ಟನ್​​ ವರುಣ್​​​ ಸಿಂಗ್​​ ಅವರನ್ನ ತಮಿಳುನಾಡಿನ ಸುಲೂರು ಏರ್​ಬೇಸ್​​ನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಆ್ಯಂಬುಲೆನ್ಸ್​​ನಲ್ಲಿ ಈಗಾಗಲೇ ವೆಲ್ಲಿಂಗ್ಟನ್​ ಆಸ್ಪತ್ರೆಯಿಂದ ಸುಲೂರ್​​ಗೆ ತೆಗೆದುಕೊಂಡು ಬರಲಾಗಿದ್ದು, ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Last Updated : Dec 9, 2021, 4:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.