ETV Bharat / bharat

ತಮಿಳುನಾಡು ವಿಧಾನಸಭಾ ಚುನಾವಣೆ : 6 ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧೆ - ಡಿಎಂಕೆ

ಮುಂಬರುವ ರಾಜ್ಯ ಚುನಾವಣೆಗೆ ಪಕ್ಷಕ್ಕೆ ಆರು ಸ್ಥಾನಗಳನ್ನು ನಿಗದಿಪಡಿಸಲಾಗಿದೆ ಎಂದು ತಮಿಳುನಾಡು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣನ್ ಈ ಹಿಂದೆ ಹೇಳಿದ್ದಾರೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವನ್ನು ಸೋಲಿಸಲು ನಾವು ಎಲ್ಲಾ 234 ಸ್ಥಾನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

CPI-M gets Thiruparankundram, Kovilpatti among six seats in DMK-led alliance
ತಮಿಳುನಾಡು ವಿಧಾನಸಭಾ ಚುನಾವಣೆ
author img

By

Published : Mar 12, 2021, 7:16 AM IST

ಚೆನ್ನೈ (ತಮಿಳುನಾಡು): ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದ್ದು, ಡಿಎಂಕೆ ಮಿತ್ರ ಪಕ್ಷ ಸಿಪಿಐ (ಎಂ) ಆರು ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.

ತಮಿಳುನಾಡಿನ ತಿರುಪರಕುಂದ್ರಂ, ದಿಂಡಿಗಲ್​, ಕೋವಿಲ್ಪಟ್ಟಿ, ಆರೂರ್, ಕೆಜ್ಹಾವೆಲ್ಲೂರ್ ಮತ್ತು ಗಂದರ್ವಕೊಟ್ಟೈ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಒಪ್ಪಂದಕ್ಕೆ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಮತ್ತು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಕೆ ಬಾಲಕೃಷ್ಣನ್ ಚೆನ್ನೈನಲ್ಲಿ ಸಹಿ ಹಾಕಿದ್ದಾರೆ.

ಮುಂಬರುವ ರಾಜ್ಯ ಚುನಾವಣೆಗೆ ಪಕ್ಷಕ್ಕೆ ಆರು ಸ್ಥಾನಗಳನ್ನು ನಿಗದಿಪಡಿಸಲಾಗಿದೆ ಎಂದು ತಮಿಳುನಾಡು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣನ್ ಈ ಹಿಂದೆ ಹೇಳಿದ್ದಾರೆ. ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವನ್ನು ಸೋಲಿಸಲು ನಾವು ಎಲ್ಲಾ 234 ಸ್ಥಾನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಓದಿ : ಇಂದು ಉತ್ತರಾಖಂಡ ಸಂಪುಟ​ ವಿಸ್ತರಣೆ ಸಾಧ್ಯತೆ!

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿ ಕೂಟಗಳು ಪರಸ್ಪರ ವಿರುದ್ಧವಾಗಿ ಸ್ಪರ್ಧಿಸುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.