ಚೆನ್ನೈ(ತಮಿಳುನಾಡು): ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ತಮಿಳುನಾಡು ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್. ದುರೈಮುರುಗನ್ ಹೇಳಿದ್ದು, ಮೇಕೆದಾಟು ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಬರುವ ಕಾವೇರಿ ನೀರನ್ನು ನಿಲ್ಲಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ತನ್ನ ಬಜೆಟ್ ಅನ್ನು 1,000 ಕೋಟಿಯಿಂದ ಮೀಸಲಿಡಲಾಗಿದೆ. ಅದನ್ನು 5,000 ಕೋಟಿಗೆ ಹೆಚ್ಚಿಸಿದರೂ, ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ತಮಿಳುನಾಡಿನ ಜನರು ಅಣೆಕಟ್ಟು ನಿರ್ಮಾಣಕ್ಕೆ ಒಂದೇ ಒಂದು ಇಟ್ಟಿಗೆಯನ್ನು ಇಡಲೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಅಣೆಕಟ್ಟು ನಿರ್ಮಾಣವನ್ನು ತಡೆಯಲು ಲಭ್ಯವಿರುವ ಎಲ್ಲ ಕಾನೂನು ಮಾರ್ಗಗಳನ್ನು ತಮಿಳುನಾಡು ಅನುಸರಿಸುತ್ತಿದೆ.
ಕರ್ನಾಟಕ ರಾಜ್ಯವು ಕಾವೇರಿ ನದಿಯ ಮೇಲಿನ ಎಲ್ಲ ಹಕ್ಕುಗಳನ್ನು ಪಡೆಯುವುದು ಸಾಧ್ಯವಿಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದು ಸಿಡಬ್ಲ್ಯೂಡಿಟಿ ಹಾಗೂ ಸುಪ್ರೀಂಕೋರ್ಟ್‌ನ ತೀರ್ಪಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ದುರೈಮುರುಗನ್ ಹೇಳಿದ್ದಾರೆ.
ತಮಿಳುನಾಡಿನ ಒಪ್ಪಿಗೆ ಇಲ್ಲದೇ ಯೋಜನೆಗೆ ಅನುಮೋದನೆ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಸಚಿವಾಲಯ ಹೇಳಿತ್ತು. ಈ ಮಧ್ಯೆ, ಎಐಎಡಿಎಂಕೆ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಓ.ಪನ್ನೀರಸೆಲ್ವಂ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸರ್ವಪಕ್ಷ ಸಭೆ ಕರೆಯಲಿದ್ದಾರೆ. ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಕೆಂಬ ಕರ್ನಾಟಕದ ಮನವಿ ತಿರಸ್ಕರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ: ಎಕ್ಸಿಟ್ ಪೋಲ್: ಉತ್ತರ ಪ್ರದೇಶದಲ್ಲಿ ಭವಿಷ್ಯ ನಿಜವಾಗುವುದೇ?, ಏನಿದರ ಲೆಕ್ಕಾಚಾರ?
ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಕೇಂದ್ರ ಜಲಸಂಪನ್ಮೂಲ ಸಚಿವರು ಹೇಳಿದ್ದು, ಈ ಹೇಳಿಕೆ ಕಳವಳಕಾರಿಯಾಗಿದೆ ಎಂದು ಪನ್ನೀರಸೆಲ್ವಂ ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ತಮಿಳುನಾಡಿಗೆ ನೀರು ಬಿಡುತ್ತಿಲ್ಲ ಮತ್ತು ಹೆಚ್ಚುವರಿ ನೀರು ಮಾತ್ರ ರಾಜ್ಯಕ್ಕೆ ತಲುಪುತ್ತಿದೆ ಎಂದು ಪನ್ನೀತರ್ಸೆಲ್ವಂ ಹೇಳಿದ್ದಾರೆ.