ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಳಿತಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ 2,35,532 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 3,35,939 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ದಿನವೊಂದರಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಸುಮಾರು ಶೇಕಡಾ 13.39ರಷ್ಟು ಮಂದಿಯಲ್ಲಿ ಸೋಂಕು ಕಂಡುಬರುತ್ತಿದೆ.
ಈವರೆಗೆ ಒಟ್ಟು 3,83,60,710 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 93.60 ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 4,93,198 ಮಂದಿ ಮೃತಪಟ್ಟಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 20,04,333 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 5.18 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 1,65,04,87,260 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಬುಧವಾರ ಒಂದೇ ದಿನದಲ್ಲಿ 56,72,766 ಮಂದಿಗೆ ಲಸಿಕೆ ನೀಡಲಾಗಿದೆ.
ವಿಶ್ವಾದ್ಯಂತ ಬಂಗಾರಕ್ಕೆ ಹೆಚ್ಚಿದ ಬೇಡಿಕೆ: ಇಟಿಎಫ್ ಭಾರಿ ಕುಸಿತ!