ಭೋಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಮಂಗಳವಾರ ಎರಡೂವರೆ ವರ್ಷದ ಬಾಲಕಿಯೊಬ್ಬಳು ಬೋರ್‌ವೆಲ್‌ಗೆ ಬಿದ್ದಿದ್ದು, ಮೃತಪಟ್ಟಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿತ್ತಾದರೂ ಬಾಲಕಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ.
ವಿದಿಶಾದಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ: ವಿದಿಶಾ ಜಿಲ್ಲೆಯ ಸಿರೊಂಜ್ ತಹಸಿಲ್ ವ್ಯಾಪ್ತಿಯ ಕಜ್ರಾಯ್ ಗ್ರಾಮದಿಂದ ಈ ಘಟನೆ ವರದಿಯಾಗಿತ್ತು. ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ವಿದಿಶಾ ಜಿಲ್ಲಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಮಗುವನ್ನು ರಕ್ಷಿಸಲು ತ್ವರಿತ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಚಿವರ ನಿರ್ದೇಶನದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ತ್ವರಿತ ಕಾರ್ಯಾಚರಣೆ ಕೈಗೊಂಡರಾದರೂ, ಬಾಲಕಿಯನ್ನು ಜೀವಂತವಾಗಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ತ್ವರಿತ ಕಾರ್ಯಾಚರಣೆಗೆ ಸಚಿವರ ಸೂಚನೆ: "ಶೀಘ್ರ ರಕ್ಷಣಾ ಕಾರ್ಯಾಚರಣೆಗಾಗಿ ನಾನು ವಿದಿಶಾ ಜಿಲ್ಲಾಡಳಿತವನ್ನು ಕೇಳಿದ್ದೇನೆ. ಎಸ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ಧಾವಿಸಿದೆ. ನಾನು ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಮಗುವಿನ ಜೀವ ಉಳಿಸಲು ಯಾವುದೇ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದೇನೆ. ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್ ಈ ಮೊದಲು ಹೇಳಿದ್ದರು.
ಘಟನೆ ಬಗ್ಗೆ ಯಾವುದೇ ಮಾಹಿತಿ ನೀಡದ ಜಿಲ್ಲಾಡಳಿತ: ಆದರೆ, ಘಟನೆಗೆ ಸಂಬಂಧಿಸಿದಂತೆ ವಿದಿಶಾ ಜಿಲ್ಲಾಡಳಿತ ಮತ್ತು ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಸಮರೋಪಾದಿಯಲ್ಲಿ ಕಾರ್ಯಾಚರಣೆ ಕೈಗೊಂಡಿತ್ತಾದರೂ ಬಾಲಕಿಯನ್ನು ಜೀವಂತವಾಗಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಕಳೆದ ತಿಂಗಳು ಸೆಹೋರ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಎರಡೂವರೆ ವರ್ಷದ ಬಾಲಕಿ ಬೋರ್‌ವೆಲ್‌ಗೆ ಬಿದ್ದಿದ್ದಳು. ಭಾರತೀಯ ಸೇನೆಯ ತಂಡವನ್ನು ಒಳಗೊಂಡ ರಕ್ಷಣಾ ಪಡೆ ಸತತ ಮೂರು ದಿನಗಳ ಕಾಲ ಸುದೀರ್ಘ ಕಾರ್ಯಾಚರಣೆ ಕೈಗೊಂಡಿತ್ತು. ಆ ಬಳಿಕವೇ ಅವಳನ್ನು ಬೋರ್ವೆಲ್ನಿಂದ ರಕ್ಷಣೆ ಮಾಡಲು ಸಾಧ್ಯವಾಗಿತ್ತು. ಆದರೆ ಬಾಲಕಿ ಅಷ್ಟರಲ್ಲಿ ಮೃತಪಟ್ಟಿದ್ದಳು.
ಈ ಹಿಂದೆ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಶಿವರಾಜಸಿಂಗ್ ಚೌಹಾಣ್: ಆ ಘಟನೆಯ ನಂತರ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಇಂತಹ ಪ್ರಕರಣಗಳನ್ನು ಆದಷ್ಟು ಮಟ್ಟಿಗೆ ತಡೆಯಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಆ ಉನ್ನತ ಮಟ್ಟದ ಸಭೆ ಬಳಿಕ ಇದೀಗ ಇಂತಹುದೇ ಮತ್ತೊಂದು ಘಟನೆ ವರದಿಯಾಗಿದೆ.
ಇದನ್ನು ಓದಿ: ಚಲಿಸುತ್ತಿದ್ದ ಬಸ್ ಮುಂದೆ ಮಹಿಳೆ ಆತ್ಮಹತ್ಯೆ.. ಮಗನ ಕಾಲೇಜು ಶುಲ್ಕಕ್ಕಾಗಿ ಹೆತ್ತಮ್ಮಳ ದಾರುಣ ಅಂತ್ಯ!