ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನಡೆದ 'ಎ' ಗುಂಪಿನ ಹಾಕಿ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಭಾರತ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ರೂಪಿಂದರ್ ಪಾಲ್ ಸಿಂಗ್ ಮತ್ತು ಸಿಮ್ರಾಂಜಿತ್ ಸಿಂಗ್ ಅವರ ಅದ್ಭುತ ಪ್ರದರ್ಶನವೇ ಈ ಗೆಲುವಿಗೆ ಕಾರಣವಾಗಿದೆ.
ಮಿಡ್ ಫೀಲ್ಡರ್ ಸಿಮ್ರಾಂಜಿತ್ 13ನೇ ನಿಮಿಷದಲ್ಲಿ ಭಾರತದ ಖಾತೆ ತೆರೆದರು. ಬಳಿಕ 15ನೇ ನಿಮಿಷದಲ್ಲಿ ರೂಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಎರಡನೇ ಗೋಲು ಬಾರಿಸಿದರು. 51ನೇ ನಿಮಿಷದಲ್ಲಿ ಮತ್ತೊಂದು ಗೋಲು ಹೊಡೆಯುವ ಮೂಲಕ ಸುಲಭವಾಗಿ ಗೆಲುವು ದಾಖಲಿಸಿತು.
ಇದನ್ನು ಓದಿ: Tokyo Olympics: 10 ಮೀ ಏರ್ ರೈಫಲ್ ಮಿಶ್ರ ಆವೃತ್ತಿಯಿಂದ ಹೊರಬಿದ್ದ ಚೌಧರಿ-ಭಾಕರ್
ಇದಕ್ಕೂ ಮೊದಲು, ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಿಂದ ಭಾರತ ಜಯಗಳಿಸಿತ್ತು. ನಂತರ ಎರಡನೇ ಪಂದ್ಯದಲ್ಲಿ ವಿಶ್ವ ನಂ. 1 ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ 1-7 ಅಂತರದಿಂದ ಸೋಲನುಭವಿಸಿತ್ತು.