ನವದೆಹಲಿ: ಕಳೆದ ಸೋಮವಾರದಿಂದ ಸಂಸತ್ ಅಧಿವೇಶನ ಆರಂಭಗೊಂಡಿದ್ದು, ಪ್ರತಿಪಕ್ಷಗಳು ಕೇಳುತ್ತಿರುವ ಅನೇಕ ಪ್ರಶ್ನೆಗಳಿಗೆ ಕೇಂದ್ರ ಲಿಖಿತ ರೂಪದಲ್ಲಿ ಉತ್ತರ ನೀಡುತ್ತಿದೆ. ಇದೀಗ ದೇಶದಲ್ಲಿ 2020ರಲ್ಲಿ ನಡೆದಿರುವ ರಸ್ತೆ ಅಪಘಾತದ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ 2020ರಲ್ಲಿ ಒಟ್ಟು 3,66,138 ರಸ್ತೆ ಅಪಘಾತ ಸಂಭವಿಸಿದ್ದು, 1,31,714 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂಬ ಮಾಹಿತಿ ನೀಡಿದ್ದಾರೆ. ಉಳಿದಂತೆ 2019ರಲ್ಲಿ ಒಟ್ಟು 4,49,002 ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ, 1,51,113 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂಬ ಮಾಹಿತಿ ನೀಡಿದ್ದಾರೆ. 2018ರಲ್ಲಿ 1,40,843 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಮಾಹಿತಿ ಸಹ ಲೋಕಸಭೆಗೆ ನೀಡಿದ್ದಾರೆ.
ಇದನ್ನೂ ಓದಿರಿ: ಆತ್ಮಹತ್ಯೆಗೆ ಶರಣಾದ ಮಹಿಳಾ ಸ್ವಯಂ ಸೇವಕಿ.. ಕಾನ್ಸ್ಟೇಬಲ್ ಕಿರುಕುಳ?
ಇದೇ ವೇಳೆ 3,400 ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನ ಸಿಕ್ಸ್ ಲೈನ್ಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದು, 6,250 ಕಿಲೋ ಮೀಟರ್ ರಸ್ತೆ ಹೆದ್ದಾರಿಯನ್ನ ಸಿಕ್ಸ್ ಲೈನ್ ಹಾಗೂ ಅದಕ್ಕಿಂತಲೂ ಮೇಲಿನ ದರ್ಜೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಮಾಹಿತಿ ಹಂಚಿಕೊಂಡರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಲೆಕ್ಟ್ರಿಕಲ್ ವೆಹಿಕಲ್ಗಳ ಚಾರ್ಜಿಂಗ್ ಪಾಯಿಂಟ್ ಆರಂಭಿಸುವ ವಿಚಾರವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಯುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ.