ETV Bharat / bharat

ದೇಶದಲ್ಲಿ 1.55 ಲಕ್ಷ ಕೊರೊನಾ ಕೇಸ್​ಗಳು ಆ್ಯಕ್ಟಿವ್​.. 44 ಲಕ್ಷ ಮಂದಿಗೆ ಲಸಿಕೆ

author img

By

Published : Feb 4, 2021, 10:43 AM IST

ದೇಶದಲ್ಲಿ ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ ಒಟ್ಟು 44,49,552 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

Total number of corona cases and deaths in India
ದೇಶದಲ್ಲಿ 1.55 ಲಕ್ಷ ಕೊರೊನಾ ಕೇಸ್​ಗಳು ಆ್ಯಕ್ಟಿವ್​

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,899 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 107 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,07,90,183 ಹಾಗೂ ಮೃತರ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ.

ಆದರೆ ಒಟ್ಟು ಸೋಂಕಿತರ ಪೈಕಿ 1,04,80,455 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,55,025 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Total number of corona cases and deaths in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಫೆಬ್ರವರಿ​ 3ರ ವರೆಗೆ 19,92,16,019 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,42,841 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ಜನವರಿ 16 ರಂದು ಭಾರತದಲ್ಲಿ ವಿಶ್ವದ ಅತಿದೊಡ್ಡ ಕೊರೊನಾ ವ್ಯಾಕ್ಸಿನ್​ ಡ್ರೈವ್​ ಆರಂಭವಾಗಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ ಒಟ್ಟು 44,49,552 ಮಂದಿಗೆ ಲಸಿಕೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.