ನವದೆಹಲಿ: ಭಾರತದಲ್ಲಿ ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 70,17,114 ಮಂದಿಗೆ ಲಸಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 12,923 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 108 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,71,294 ಹಾಗೂ ಮೃತರ ಸಂಖ್ಯೆ 1,55,36ಕ್ಕೆ ಏರಿಕೆಯಾಗಿದೆ. ಆದರೆ ಶೇ.97ಕ್ಕೂ ಅಧಿಕ ಅಂದರೆ 1,05,73,372 ಮಂದಿ ಮಹಾಮಾರಿ ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 1,42,562 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಫೆಬ್ರವರಿ 10ರ ವರೆಗೆ 20,40,23,840 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,99,185 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.