ನವದೆಹಲಿ: ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ನಡೆಸುತ್ತಿರುವ ಭಾರತದಲ್ಲಿ ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 79,67,647 ಮಂದಿಗೆ ಲಸಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 12,143 ಸೋಂಕಿತರು ಪತ್ತೆಯಾಗಿದ್ದು, 103 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,92,746 ಹಾಗೂ ಮೃತರ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,06,00,625 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 1,36,571 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಫೆಬ್ರವರಿ 12ರ ವರೆಗೆ 20,55,33,398 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,43,614 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.