ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,09,04,940 ಏರಿಕೆಯಾಗಿದೆಯಾದರೂ ಇವರಲ್ಲಿ 1,06,11,731 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಶನಿವಾರ 12,194 ಕೇಸ್ಗಳು ಹಾಗೂ 92 ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 1,55,642 ಕ್ಕೆ ಹೆಚ್ಚಳವಾಗಿದೆ. 1,37,567 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಕರ್ನೂಲ್ನಲ್ಲಿ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದು ಮಗು ಸೇರಿ 14 ಜನ ದುರ್ಮರಣ
ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 82,63,858 ಮಂದಿಗೆ ಲಸಿಕೆ ನೀಡಲಾಗಿದೆ.
ಫೆಬ್ರವರಿ 13ರ ವರೆಗೆ 20,62,30,512 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,97,114 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.