ನವದೆಹಲಿ: ಭಾರತದಲ್ಲಿ ಕೋವಿಡ್ ಮೃತರ ಸಂಖ್ಯೆ 1,56,014ಕ್ಕೆ ಏರಿಕೆಯಾಗಿದ್ದರೂ ಸಹ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಕಡಿಮೆಯಿದೆ.
ಕಳೆದ 24 ಗಂಟೆಗಳಲ್ಲಿ 12,881 ಸೋಂಕಿತರು ಪತ್ತೆಯಾಗಿದ್ದು,101 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲೀಗ ಕೊರೊನಾ ಕೇಸ್ಗಳ ಸಂಖ್ಯೆ 1,09,50,201ಕ್ಕೆ ಏರಿಕೆಯಾಗಿದೆ. ಇವರಲ್ಲಿ 1,06,56,845 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 1,37,342 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಶತಕದ ಸನಿಹದಲ್ಲಿ ಪೆಟ್ರೋಲ್ ಬೆಲೆ: ದೇಶಾದ್ಯಂತ ಎಷ್ಟಿದೆ ಗೊತ್ತಾ ತೈಲ ದರ!?
ಫೆಬ್ರವರಿ 17ರ ವರೆಗೆ 20,87,03,791 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,26,562 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 94,22,228 ಮಂದಿಗೆ ಲಸಿಕೆ ನೀಡಲಾಗಿದೆ.