ನವದೆಹಲಿ: ಕಳೆದ 24 ಗಂಟೆಗಳಲ್ಲಿ 10,584 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 78 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,10,16,434 ಹಾಗೂ ಮೃತರ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,07,12,665 ಮಂದಿ ಗುಣಮುಖರಾಗಿದ್ದು, 1,47,306 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲೇ ಹೆಚ್ಚು ಕೇಸ್ಗಳು ಆ್ಯಕ್ಟಿವ್ ಆಗಿವೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ದುರಂತ: ಜಿಲೆಟಿನ್ ಸ್ಫೋಟದಿಂದ 6 ಜನ ದುರ್ಮರಣ
ಫೆಬ್ರವರಿ 22ರ ವರೆಗೆ 21,22,30,431 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,78,685 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 1,17,45,552 ಮಂದಿಗೆ ಲಸಿಕೆ ನೀಡಲಾಗಿದೆ.