ನವದೆಹಲಿ: ಭಾರತದಲ್ಲಿ ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 1,42,42,547 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ವ್ಯಾಕ್ಸಿನ್ ಪಡೆದ ಬಳಿಕ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
-
#LargestVaccineDrive pic.twitter.com/ZJuWOXGWVL
— Ministry of Health (@MoHFW_INDIA) February 27, 2021 " class="align-text-top noRightClick twitterSection" data="
">#LargestVaccineDrive pic.twitter.com/ZJuWOXGWVL
— Ministry of Health (@MoHFW_INDIA) February 27, 2021#LargestVaccineDrive pic.twitter.com/ZJuWOXGWVL
— Ministry of Health (@MoHFW_INDIA) February 27, 2021
ಕಳೆದ 24 ಗಂಟೆಗಳಲ್ಲಿ 16,488 ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,10,79,979 ಹಾಗೂ ಮೃತರ ಸಂಖ್ಯೆ 1,56,938ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.97ಕ್ಕೂ ಹೆಚ್ಚು ಅಂದರೆ 1,07,63,451 ಮಂದಿ ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ. 1,59,590 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಫೆಬ್ರವರಿ 26ರ ವರೆಗೆ 21,54,35,383 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,73,918 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.