ನವದೆಹಲಿ: ಸೋಮವಾರ ಮತ್ತೆ 24,492 ಹೊಸ ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, 131 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,14,09,831 ಹಾಗೂ ಮೃತರ ಸಂಖ್ಯೆ 1,58,856ಕ್ಕೆ ಏರಿಕೆಯಾಗಿದೆ. ಜನವರಿ 16ರಿಂದ ಈವರೆಗೆ 3,29,47,432 ಮಂದಿಗೆ ಲಸಿಕೆ ನೀಡಲಾಗಿದೆ.
ಒಟ್ಟು ಸೋಂಕಿತರ ಪೈಕಿ 1,10,27,543 ಜನರು ಗುಣಮುಖರಾಗಿದ್ದಾರೆ. ಆದರೆ, ದಿನೇ ದಿನೆ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದರಿಂದ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ 2,23,432ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಲಸಿಕೆ ಕುರಿತ ವದಂತಿ ಹರಡಲು ಸೋಷಿಯಲ್ ಮೀಡಿಯಾ ಬಳಕೆದಾರರೇ ಕಾರಣ: ಫೇಸ್‌ಬುಕ್
ಮಾರ್ಚ್ 15ರ ವರೆಗೆ 22,82,80,763 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,73,350 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.