ನವದೆಹಲಿ: ಕೊರೊನಾ ಸಾವು-ನೋವಿನಲ್ಲಿ ಇಳಿಕೆ ಕಂಡಿದ್ದ ಭಾರತದಲ್ಲೀಗ ಮತ್ತೆ ಮಹಾಮಾರಿ ಅಬ್ಬರಿಸುತ್ತಿದೆ. ಬುಧವಾರ 35,871 ಪ್ರಕರಣಗಳು ಹಾಗೂ 172 ಸಾವು ವರದಿಯಾಗಿವೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,14,74,605 ಹಾಗೂ ಮೃತರ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,10,63,025 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಸಕ್ರಿಯ ಕೇಸ್ಗಳ ಸಂಖ್ಯೆ 2,52,364ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಅಸ್ಸೋಂ, ಬಂಗಾಳದಲ್ಲಿಂದು ಪಿಎಂ ಮೋದಿ ಚುನಾವಣಾ ರ‍್ಯಾಲಿ
ಮಾರ್ಚ್ 17ರವರೆಗೆ 23 ಕೋಟಿಗೂ ಹೆಚ್ಚು (23,03,13,163) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,63,379 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ದೇಶಾದ್ಯಂತ 2ನೇ ಹಂತದ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 3,71,43,255 ಮಂದಿಗೆ ಲಸಿಕೆ ನೀಡಲಾಗಿದೆ.