ನವದೆಹಲಿ: ದಿನವೊಂದಕ್ಕೆ ದೇಶದಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಸಾವು-ನೋವಿನ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಭಾನುವಾರ ಒಂದೇ ದಿನ 46,951 ಕೇಸ್ಗಳು ಪತ್ತೆಯಾಗಿದ್ದರೆ, 212 ಸೋಂಕಿತರು ಮೃತಪಟ್ಟಿದ್ದಾರೆ. ಅನೇಕ ದಿನಗಳ ಬಳಿಕ ಸಾವಿನ ಸಂಖ್ಯೆ 200ರ ಗಡಿ ದಾಟಿದೆ.
ಭಾರತದಲ್ಲೀಗ ಸೋಂಕಿತರ ಸಂಖ್ಯೆ 1,16,46,081ಕ್ಕೆ, ಮೃತರ ಸಂಖ್ಯೆ 1,59,967ಕ್ಕೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 3,34,646ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,11,51,468 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಶೋಪಿಯಾನ್ ಎನ್‌ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನೆ, ಇಂಟರ್ನೆಟ್ ಸ್ಥಗಿತ
ಮಾರ್ಚ್ 21ರ ವರೆಗೆ 23,44,45,774 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,80,655 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ. ಇನ್ನು ಜನವರಿ 16ರಿಂದ ಈವರೆಗೆ ಒಟ್ಟು 4,50,65,998 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.