ETV Bharat / bharat

ಒಂದೇ ದಿನ 72 ಸಾವಿರ ಕೋವಿಡ್​ ಕೇಸ್​, 459 ಸಾವು ವರದಿ: ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಭಾರತದಲ್ಲೀಗ ಕೊರೊನಾ ಕೇಸ್​ಗಳ ಸಂಖ್ಯೆ 1,22,21,665 ಹಾಗೂ ಮೃತರ ಸಂಖ್ಯೆ 1,62,927ಕ್ಕೆ ಏರಿಕೆಯಾಗಿದೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 5,84,055ಕ್ಕೆ ಹೆಚ್ಚಳವಾಗಿದೆ.

Total number of corona cases, deaths, Vaccination in India
ಭಾರತದಲ್ಲಿ ಕೋವಿಡ್ ಸೋಂಕಿತರು
author img

By

Published : Apr 1, 2021, 11:12 AM IST

ನವದೆಹಲಿ: ದಿಢೀರ್​ ಎಂದು ದೇಶದಲ್ಲಿ ಕೋವಿಡ್​ ಸಾವು-ನೋವಿನ ಪ್ರಮಾಣ ಹೆಚ್ಚಾಗಿದ್ದು, ಅನೇಕ ನಗರಗಳಲ್ಲಿ ಲಾಕ್​ಡೌನ್​ ಭಯ ಶುರುವಾಗಿದೆ. ಬುಧವಾರ ಒಂದೇ ದಿನ ಬರೋಬ್ಬರಿ 72,330 ಸೋಂಕಿತರು ಪತ್ತೆಯಾಗಿದ್ದರೆ, 459 ಮಂದಿ ವೈರಸ್​ಗೆ ಬಲಿಯಾಗಿದ್ದಾರೆ.

ಭಾರತದಲ್ಲೀಗ ಕೊರೊನಾ ಕೇಸ್​ಗಳ ಸಂಖ್ಯೆ 1,22,21,665 ಹಾಗೂ ಮೃತರ ಸಂಖ್ಯೆ 1,62,927ಕ್ಕೆ ಏರಿಕೆಯಾಗಿದೆ. ಇತ್ತ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 5,84,055ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿತರ ಪೈಕಿ 1,14,74,683 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಈವರೆಗೆ ಆರೋಗ್ಯ ಕಾರ್ಯಕರ್ತರು, ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೇರಿ ಒಟ್ಟು 6,51,17,896 ಮಂದಿಗೆ ಲಸಿಕೆ ನೀಡಲಾಗಿತ್ತು. ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್​ ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

Total number of corona cases, deaths, Vaccination in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಇನ್ನು ಮಾರ್ಚ್​​ 1ರ ವರೆಗೆ 24 ಕೋಟಿಗೂ ಹೆಚ್ಚು 24,47,98,621 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,25,681 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.