ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸಕ್ಕೆ ನಿನ್ನೆ ಒಂದೇ ದಿನ 469 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 81,466 ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲೀಗ ಸೋಂಕಿತರ ಸಂಖ್ಯೆ 1,23,03,131 ಹಾಗೂ ಮೃತರ ಸಂಖ್ಯೆ 1,63,396ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳ ಹಿಂದೆ ಒಂದು ಲಕ್ಷಕ್ಕೆ ಇಳಿಕೆಯಾಗಿದ್ದ ಸಕ್ರಿಯ ಪ್ರಕರಣಗಳು ಕೂಡ ಈಗ 6 ಲಕ್ಷಕ್ಕೆ (6,14,696) ಹೆಚ್ಚಳವಾಗಿದೆ. 1.23 ಕೋಟಿ ಸೋಂಕಿತರಲ್ಲಿ 1,15,25,039 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ನವಜಾತ ಶಿಶುಗಳಿಗೆ ಕೊರೊನಾ: ಮಕ್ಕಳಿಗಾಗಿ ವಿಶೇಷ ಕೋವಿಡ್ ಕೇರ್ ಸೆಂಟರ್
ಇಲ್ಲಿ ವರೆಗೆ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗಿತ್ತು. ನಿನ್ನೆಯಿಂದ 45 ವರ್ಷ ಮೇಲ್ಪಟ್ಟವರಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 6,87,89,138 ಮಂದಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ.
ಇನ್ನು ಏಪ್ರಿಲ್ 1ರ ವರೆಗೆ 11 ಕೋಟಿಗೂ ಹೆಚ್ಚು 24,59,12,587 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 11,13,966 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.