ಕೇರಳ: ಕಾರೊಂದು 150 ಅಡಿ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಮುನ್ನಾವರ್ನಲ್ಲಿ ನಡೆದಿದೆ. ತ್ರಿಶೂರ್ ಜಿಲ್ಲೆಯ ಗುರುವಾಯೂರಿನ ನಿವಾಸಿಯಾದ ವಿನೋದ್ ಖನ್ನಾ ಮೃತ ವ್ಯಕ್ತಿ.
ಬುಧವಾರ ರಾತ್ರಿ ಮುನ್ನಾವರ್ನ ಕೊಲುಕ್ಕುಮಲೈಗೆ ಪಯಣಿಸುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಈ ಕಾರಿನಲ್ಲಿ ನಾಲ್ವರು ಕಾರಿನ ಸಮೇತ ಕಂದಕಕ್ಕೆ ಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರನ್ನು ಸ್ಥಳೀಯರು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ