ETV Bharat / bharat

ಸೇತುವೆಯಿಂದ ನದಿಗೆ ಬಿದ್ದ ಟ್ರ್ಯಾಕ್ಟರ್: 21 ಮಂದಿ ದುರ್ಮರಣ

ಟ್ರ್ಯಾಕ್ಟರ್ ಟ್ರಾಲಿ ಸೇತುವೆಯಿಂದ ನದಿಗೆ ಬಿದ್ದು ಸುಮಾರು 21 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ.

tractor trolley fail in garra river in uttar pradesh
ಸೇತುವೆಯಿಂದ ನದಿಗೆ ಬಿದ್ದ ಟ್ರ್ಯಾಕ್ಟರ್: 21 ಮಂದಿ ದುರ್ಮರಣ
author img

By

Published : Apr 15, 2023, 4:44 PM IST

Updated : Apr 15, 2023, 5:50 PM IST

ಶಹಜಹಾನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಹಜಹಾನ್‌ಪುರ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಸೇತುವೆಯಿಂದ ನದಿಗೆ ಬಿದ್ದು 21 ಮಂದಿ ದುರ್ಮರಣ ಹೊಂದಿದ್ದಾರೆ. ಮೃತರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇಲ್ಲಿನ ತಿಲ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿರ್ಸಿಂಗ್ ಗ್ರಾಮದ ಬಳಿಯ ನದಿ ಸಮೀಪ ಈ ಅಪಘಾತ ನಡೆದಿದೆ. ಟ್ರ್ಯಾಕ್ಟರ್​ ಟ್ರಾಲಿಯಲ್ಲಿ ಸುಮಾರು 41 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಘಟನೆ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಹಾರ ಕಾರ್ಯದಲ್ಲಿ ಆರಂಭಿಸಿದ್ದಾರೆ.

ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್​ ಮಾಡಿದ್ದು, ಶಹಜಹಾನ್‌ಪುರ ಜಿಲ್ಲೆಯ ಗರ್ರಾ ನದಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ, ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿವೆ. ಉನ್ನತ ಆಡಳಿತದ ಎಲ್ಲ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.

  • #UPCM @myogiadityanath ने जनपद कन्नौज में हुए सड़क हादसे में हुई जनहानि पर गहरा दुःख प्रकट किया है। मुख्यमंत्री जी ने दिवंगत आत्मा की शांति की कामना करते हुए शोक संतप्त परिजनों के प्रति संवेदना व्यक्त की है।

    मुख्यमंत्री जी ने घायलों को तत्काल अस्पताल पहुंचाकर जिला प्रशासन के…

    — CM Office, GoUP (@CMOfficeUP) April 15, 2023 " class="align-text-top noRightClick twitterSection" data=" ">

ನೀರು ತೆಗೆದುಕೊಂಡು ಹೋಗಲು ಬಂದಿದ್ದ ಗ್ರಾಮಸ್ಥರು: ಮೃತರನ್ನು ಅಜ್ಮತ್‌ಪುರ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಇವರು ''ಭಗವತ್ ಕಥಾ''ಕ್ಕೆ ನೀರು ತರಲು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರ ಸಂಬಂಧಿಕರಿಗೆ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸಿಎಂ ಯೋಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಜವರಾಯನ ಅಟ್ಟಹಾಸ..ಮಹಾರಾಷ್ಟ್ರದಲ್ಲಿ ಬಸ್​ ಕಂದಕಕ್ಕೆ ಬಿದ್ದು 12 ಮಂದಿ ದುರ್ಮರಣ

ಮತ್ತೊಂದೆಡೆ, ಉತ್ತರ ಪ್ರದೇಶ ಶ್ರಾವಸ್ತಿ ಜಿಲ್ಲೆಯಲ್ಲಿ ಇಂದು ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಲ್ಲಿನ ಐಕೌನಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 730ರಲ್ಲಿರುವ ಸೀತಾದ್ವಾರ ಎಂಬಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​ ಕಂದಕಕ್ಕೆ ಬಿದ್ದು 12 ಜನ ಸಾವು: ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಖಾಸಗಿ ಬಸ್ಸೊಂದು ಕಂದಕಕ್ಕೆ ಬಿದ್ದು 12 ಜನರು ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

40 ಜನರಿದ್ದ ಖಾಸಗಿ ಬಸ್​ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ನಡೆದಿದೆ. ಪರಿಣಾಮ ಬಸ್​ನಲ್ಲಿದ್ದ 12 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಸರ್ಕಾರ ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ಪ್ರಯಾಣಿಕರ ಸಾವು, 8 ಜನರ ಸ್ಥಿತಿ ಗಂಭೀರ

Last Updated : Apr 15, 2023, 5:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.