ETV Bharat / bharat

ಚು.ಆಯುಕ್ತರ ನೇಮಕಾತಿ: ನ್ಯಾಯಾಂಗ ಉಪಸ್ಥಿತಿಯಿಂದ ಪಾರದರ್ಶಕತೆ ಅನ್ನೋದು ಊಹೆ- ಕೇಂದ್ರ ಸರ್ಕಾರ - ಈಟಿವಿ ಭಾರತ ಕನ್ನಡ

ಕೇಂದ್ರ ಚುನಾವಣಾ ಆಯೋಗಕ್ಕೆ ಆಯುಕ್ತರ ನೇಮಕಾತಿ ವಿಚಾರದಲ್ಲಿ ನ್ಯಾಯಾಂಗದ ಉಪಸ್ಥಿತಿಯಿಂದ ಮಾತ್ರ ಸ್ವಾತಂತ್ರ್ಯ ಮತ್ತು ನ್ಯಾಯಸಮ್ಮತತೆ ಅನ್ನೋದು ಊಹೆಯಾಗುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು.

ನ್ಯಾಯಾಂಗದ ಉಪಸ್ಥಿತಿಯಿಂದ ನೇಮಕಾತಿಯಲ್ಲಿ ಪಾರದರ್ಶಕತೆ ಎಂಬುದು ತಪ್ಪು: ಸುಪ್ರೀಂ ಕೋರ್ಟ್​ಗೆ ಕೇಂದ್ರದ ಪ್ರತಿಕ್ರಿಯೆ
Transparency in recruitment by judicial presence: Centre response to Supreme Court
author img

By

Published : Nov 24, 2022, 12:31 PM IST

Updated : Nov 24, 2022, 1:05 PM IST

ನವ ದೆಹಲಿ: ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ನ್ಯಾಯಾಂಗದ ಯಾರಾದರೊಬ್ಬರ ಉಪಸ್ಥಿತಿಯು ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಸ್ವಾತಂತ್ರ್ಯವನ್ನು ಖಚಿತಪಡಿಸುತ್ತದೆ ಎಂಬುದು ಕೇವಲ ಊಹೆ ಎಂದು ಕೇಂದ್ರ ಸರ್ಕಾರವು ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಪೀಠದ ಮುಂದೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಾಂಗದ ಉಪಸ್ಥಿತಿಯಿಂದ ಮಾತ್ರ ಸ್ವಾತಂತ್ರ್ಯ ಮತ್ತು ನ್ಯಾಯಸಮ್ಮತತೆ ಸಾಧಿಸಲಾಗುತ್ತದೆ ಎಂಬುದು ಊಹೆಯಾಗುತ್ತದೆ ಎಂದು ಹೇಳಿದರು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠದ ಎದುರು ವಾದ ಮಂಡಿಸಿದ ಮೆಹ್ತಾ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಯು ಕಾನೂನಿನ ಅನುಪಸ್ಥಿತಿಯಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಸದಸ್ಯರಾಗಿ ಒಳಗೊಂಡಿರುವ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂಬ ಅರ್ಜಿದಾರರ ಪ್ರಸ್ತಾಪವನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದರು.

ಕಾನೂನು ಇಲ್ಲದಿರುವಾಗ ಇದೇ ಕಾನೂನಾಗಿರಬೇಕು ಎಂದು ಘನ ನ್ಯಾಯಾಲಯ ಹೇಳಲು ಸಾಧ್ಯವಿಲ್ಲ. ಏಕೆಂದರೆ ನ್ಯಾಯಾಲಯವು ಸಂವಿಧಾನದೊಂದಿಗೆ ವ್ಯವಹರಿಸುತ್ತಿದೆಯೇ ಹೊರತು ಶಾಸನದೊಂದಿಗೆ ಅಲ್ಲ ಎಂದು ಅವರು ಹೇಳಿದರು.

ಕಾನೂನಿನ ಅನುಪಸ್ಥಿತಿಯಲ್ಲಿ ಮಾಡಲಾಗುವ ಯಾವುದೇ ನೇಮಕಾತಿಗಳನ್ನು ಸೂಕ್ತ ಎಂದು ನೀವು ಭಾವಿಸುತ್ತೀರಾ ಎಂದು ನ್ಯಾಯಮೂರ್ತಿ ರಸ್ತೋಗಿ, ಮೆಹ್ತಾ ಅವರಿಗೆ ಕೇಳಿದರು.

ಹೌದು, ಸಾಂವಿಧಾನಿಕ ಪ್ರತಿಪಾದನೆಯಂತೆ ಕಾರ್ಯಾಂಗದ ಸ್ವಾತಂತ್ರ್ಯ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಗಳೆರಡೂ ಸಮಾನವಾಗಿ ಪವಿತ್ರವಾಗಿವೆ. ಅಧಿಕಾರದ ಪ್ರತ್ಯೇಕತೆಯ ಸಿದ್ಧಾಂತವು 14 ನೇ ವಿಧಿಯಿಂದ ಬಂದಿದೆ, ಅಂದರೆ ಸಂವಿಧಾನದ ದೃಷ್ಟಿಯಲ್ಲಿ ರಾಷ್ಟ್ರದ ಎಲ್ಲಾ ಅಂಗಗಳು ಸಮಾನವಾಗಿವೆ ಎಂದು ಮೆಹ್ತಾ ಉತ್ತರಿಸಿದರು.

ಸಿಬಿಐ ನಿರ್ದೇಶಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಭಾಗಿಯಾಗಿದ್ದಾರೆ. ಹಾಗಿರುವಾಗ ಪ್ರಜಾಪ್ರಭುತ್ವದಲ್ಲಿ ಇದರ ಅರ್ಥವೇನು ಎಂದು ನ್ಯಾಯಮೂರ್ತಿ ಜೋಸೆಫ್ ಸಾಲಿಸಿಟರ್ ಜನರಲ್​ರಿಗೆ ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ, ಧರ್ಮ ಆಧಾರದಲ್ಲಿ ಮತಪಟ್ಟಿಯಿಂದ ಯಾರ ಹೆಸರನ್ನೂ ಕೈಬಿಟ್ಟಿಲ್ಲ: ಚುನಾವಣಾ ಆಯೋಗ

Last Updated : Nov 24, 2022, 1:05 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.