ETV Bharat / bharat

ರಾಜಕೀಯದಲ್ಲಿ ಉಳಿಯಲು ಶಶಿಕಲಾ ಮನವೊಲಿಸುವ ಪ್ರಯತ್ನ: ಟಿಟಿವಿ ದಿನಕರನ್​​ - ಎಎಂಎಂಕೆ ಮುಖ್ಯಸ್ಥ ಟಿಟಿವಿ ದಿನಕರನ್

ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿರುವ ಶಶಿಕಲಾ ಅವರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಿರುವುದಾಗಿ ಎಎಂಎಂಕೆ ಪಕ್ಷದ ಮುಖ್ಯಸ್ಥ ಟಿಟಿವಿ ದಿನಕರನ್ ಹೇಳಿದ್ದಾರೆ.

TTV Dhinakaran
ಟಿಟಿವಿ ದಿನಕರನ್​​
author img

By

Published : Mar 3, 2021, 11:39 PM IST

ಚೆನ್ನೈ, ತಮಿಳುನಾಡು: ನೆರೆ ರಾಜ್ಯದಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ಎಐಎಡಿಎಂಕೆ ನಾಯಕಿಯಾಗಿದ್ದ, ಮಾಜಿ ಸಿಎಂ ದಿವಂಗತೆ ಜಯಲಲಿತಾ ಆಪ್ತೆ ವಿ.ಶಶಿಕಲಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಶಶಿಕಲಾ ಅವರನ್ನು ಭೇಟಿಯಾಗಿ ಮಾತನಾಡಿದ ಎಎಂಎಂಕೆ ಮುಖಂಡ ಟಿಟಿವಿ ದಿನಕರನ್ ಶಶಿಕಲಾ ಅವರನ್ನು ರಾಜಕೀಯದಿಂದ ದೂರ ಉಳಿಯದಂತೆ ಮನವೊಲಿಸಲು ಪ್ರಯತ್ನ ಪಟ್ಟಿರುವುದಾಗಿ ಹೇಳಿದ್ದಾರೆ.

ಇದರ ಜೊತೆಗೆ ತಮಿಳುನಾಡಿನಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಎಂಎಂಕೆ ಪಕ್ಷವು ತನ್ನದೇ ನಾಯಕತ್ವದಲ್ಲಿ ಸ್ಪರ್ಧೆ ನಡೆಸಲಿದೆ ಎಂದು ಈ ವೇಳೆ ಟಿಟಿವಿ ದಿನಕರನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್​

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆ ಅನುಭವಿಸಿ, ತಮಿಳುನಾಡಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ಅಲ್ಲಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಕ್ಕೆ ಕಾರಣವಾಗಲಿದ್ದಾರೆ ಎಂಬ ಮಾಹಿತಿ ಹರಿದಾಡಿತ್ತು.

ಆದರೆ ಇದರ ಬೆನ್ನಲ್ಲೇ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ. ನನಗೆ ಯಾವುದೇ ರೀತಿಯ ರಾಜಕೀಯ ಹುದ್ದೆ ಹಾಗೂ ಸ್ಥಾನಮಾನಗಳ ಬಗ್ಗೆ ಆಸಕ್ತಿ ಇಲ್ಲ ಎಂದು ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.