ಪಶ್ಚಿಮ ಮಿಡ್ನಾಪುರ: ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರುವ ವೇಳೆ ಪಶ್ಚಿಮ ಮಿಡ್ನಾಪುರದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ನನ್ನ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆಂದು ಕೇಂದ್ರ ಸಚಿವ ವಿ.ಮುರಳೀಧರನ್ ಆರೋಪಿಸಿದ್ದಾರೆ.
-
TMC goons attacked my convoy in West Midnapore, broken windows, attacked personal staff. Cutting short my trip. #BengalBurning @BJP4Bengal @BJP4India @narendramodi @JPNadda @AmitShah @DilipGhoshBJP @RahulSinhaBJP pic.twitter.com/b0HKhhx0L1
— V Muraleedharan (@VMBJP) May 6, 2021 " class="align-text-top noRightClick twitterSection" data="
">TMC goons attacked my convoy in West Midnapore, broken windows, attacked personal staff. Cutting short my trip. #BengalBurning @BJP4Bengal @BJP4India @narendramodi @JPNadda @AmitShah @DilipGhoshBJP @RahulSinhaBJP pic.twitter.com/b0HKhhx0L1
— V Muraleedharan (@VMBJP) May 6, 2021TMC goons attacked my convoy in West Midnapore, broken windows, attacked personal staff. Cutting short my trip. #BengalBurning @BJP4Bengal @BJP4India @narendramodi @JPNadda @AmitShah @DilipGhoshBJP @RahulSinhaBJP pic.twitter.com/b0HKhhx0L1
— V Muraleedharan (@VMBJP) May 6, 2021
ಘಟನೆಗೆ ಸಾಕ್ಷಿಯಾಗಿ ವಿಡಿಯೋವೊಂದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಚಿವರು, ತಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಟಿಎಂಸಿ ಗೂಂಡಾಗಳು ಕಾರಿನ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ, ನಮ್ಮ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ, ನನ್ನ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆ: ವರದಿ ಕೇಳಿ ದೀದಿ ಸರ್ಕಾರಕ್ಕೆ ಕೇಂದ್ರದ ಎಚ್ಚರಿಕೆ
ಮೇ 2ರಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ನಮ್ಮ 9 ಕಾರ್ಯಕರ್ತರನ್ನು ಟಿಎಂಸಿ ಕಾರ್ಯಕರ್ತರು ಹತೈಗೈದಿದ್ದಾರೆ. ಪಕ್ಷದ ಕಚೇರಿ, ಅನೇಕ ಕಾರ್ಯಕರ್ತರ ಮನೆ ಮತ್ತು ಅಂಗಡಿಗಳು ಧ್ವಂಸವಾಗಿವೆ ಎಂದು ಬಿಜೆಪಿ ಆರೋಪಿಸಿದೆ.