ಕೋಲ್ಕತ್ತಾ(ಪಶ್ಚಿಮ ಬಂಗಾಳ): ಆಡಳಿತರೂಢ ತೃಣಮೂಲ ಕಾಂಗ್ರೆಸ್ನ 38 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಮಿಥುನ್ ಚಕ್ರವರ್ತಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಟಿಎಂಸಿಯ 38 ಶಾಸಕರ ಪೈಕಿ 21 ಎಂಎಲ್ಎಗಳು ನೇರವಾಗಿ ನಮ್ಮೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
-
#WATCH | West Bengal: Do you want to hear breaking news? At this moment, 38 TMC MLAs have very good relations with us, out of which 21 are in direct (contact with us): BJP leader Mithun Chakraborty in Kolkata pic.twitter.com/1AI7kB4H5I
— ANI (@ANI) July 27, 2022 " class="align-text-top noRightClick twitterSection" data="
">#WATCH | West Bengal: Do you want to hear breaking news? At this moment, 38 TMC MLAs have very good relations with us, out of which 21 are in direct (contact with us): BJP leader Mithun Chakraborty in Kolkata pic.twitter.com/1AI7kB4H5I
— ANI (@ANI) July 27, 2022#WATCH | West Bengal: Do you want to hear breaking news? At this moment, 38 TMC MLAs have very good relations with us, out of which 21 are in direct (contact with us): BJP leader Mithun Chakraborty in Kolkata pic.twitter.com/1AI7kB4H5I
— ANI (@ANI) July 27, 2022
ಕೋಲ್ಕತ್ತಾದಲ್ಲಿ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ನೀವು ಈ ಕ್ಷಣದಲ್ಲಿ ಬ್ರೇಕಿಂಗ್ ನ್ಯೂಸ್ ಕೇಳಲು ಬಯಸುವಿರಾ? 38 ಟಿಎಂಸಿ ಶಾಸಕರು ನಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ, ಅವರಲ್ಲಿ 21 ಮಂದಿ ನೇರ ಸಂಪರ್ಕದಲ್ಲಿದ್ದಾರೆ ಎಂದರು. ಈ ಮೂಲಕ ಪಶ್ಚಿಮ ಬಂಗಾಳದಲ್ಲೂ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ಇದನ್ನೂ ಓದಿರಿ: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಆಯೋಗ ನೇಮಕ: ಆರು ತಿಂಗಳಲ್ಲಿ ವರದಿ ಸಲ್ಲಿಸಲು ಸೂಚನೆ
ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿ ಬಿಜೆಪಿ ಸೇರ್ಪಡೆಗೊಂಡಿರುವ ಮಿಥುನ್ ಚಕ್ರವರ್ತಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ಕಾರ್ಯ ನಡೆಸಿದ್ದರು. ಆದರೆ, ಚುನಾವಣೆ ಬಳಿಕ ಚಕ್ರವರ್ತಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ಇದೀಗ ಈ ರೀತಿಯ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.