ETV Bharat / bharat

ನ್ಯಾಯಾಲಯದ ಆವರಣದಲ್ಲಿಯೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ತ್ರಿವಳಿ ತಲಾಖ್ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಪತಿಯ ವಿರುದ್ಧ ಮುಸ್ಲಿಂ ಮಹಿಳೆಯರ ವಿವಾಹ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

triple talaq in bhopal
ಭೋಪಾಲ್​ನಲ್ಲಿ ಬೆಳಕಿಗೆ ಬಂದ ತ್ರಿವಳಿ ತಲಾಖ್ ಪ್ರಕರಣ
author img

By

Published : Nov 27, 2022, 10:56 PM IST

ಭೋಪಾಲ್( ಮಧ್ಯಪ್ರದೇಶ): ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ತ್ರಿವಳಿ ತಲಾಖ್ ಪ್ರಕರಣ ಬೆಳಕಿಗೆ ಬಂದಿದೆ. ವರದಕ್ಷಿಣೆಗಾಗಿ ಪತಿ ತನ್ನ ಪತ್ನಿಯೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ತ್ರಿವಳಿ ತಲಾಖ್ ನೀಡಿದ್ದಾನೆ.

ಸಂತ್ರಸ್ತೆ ಪತ್ನಿಯ ಕುಟುಂಬದವರಿಗೆ ವರದಕ್ಷಿಣೆ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗಿರಲಿಲ್ಲ ಇದರಿಂದಾಗಿ ಪತಿ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದು ಪೊಲೀಸರು ಪತಿಯ ವಿರುದ್ಧ ಮಹಿಳಾ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಈ ವಿಚಾರವಾಗಿ ನ್ಯಾಯಾಲಯಕ್ಕೆ ಬಂದ ಪತ್ನಿಗೆ ಆವರಣದಲ್ಲಿಯೇ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ. ನಂತರ ಪೊಲೀಸರು ಪತಿಯ ವಿರುದ್ಧ ತ್ರಿವಳಿ ತಲಾಖ್ ಪ್ರಕರಣದಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಮಹಿಳೆಗೆ ವರದಕ್ಷಿಣೆ ಕಿರುಕುಳ: ಭೋಪಾಲ್‌ನ ಎಂಪಿ ನಗರ ಪೊಲೀಸ್ ಠಾಣೆ ಅಧಿಕಾರಿ ಸುಧೀರ್ ಅರ್ಜಾರಿಯಾ ಮಾತನಾಡಿ, 30 ವರ್ಷದ ಮಹಿಳೆ ಶಹಜಹಾನಾಬಾದ್​ನ ನಿವಾಸಿಯಾಗಿದ್ದು ಅಜರ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು.

ಮದುವೆಯ ನಂತರ ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದಾನೆ. ಆದರೆ ವರದಕ್ಷಿಣೆ ಬೇಡಿಕೆಯನ್ನು ಪೂರೈಸುವಷ್ಟು ಪೋಷಕರ ಆರ್ಥಿಕ ಸ್ಥಿತಿ ಸರಿ ಇರಲಿಲ್ಲ. ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮಹಿಳೆ ಮೂರು ವರ್ಷಗಳ ಹಿಂದೆ ತಮ್ಮ ತಾಯಿಯ ಮನೆಗೆ ಬಂದಿದ್ದರು. ಈ ವೇಳೆ ಮಹಿಳೆ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಯು ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಇದೇ ವಿಚಾರವಾಗಿ ನ.24ರಂದು ನ್ಯಾಯಾಲಯಕ್ಕೆ ಬಂದಿದ ಪತ್ನಿಗೆ ಆವರಣದಲ್ಲಿಯೇ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ. ಈ ಘಟನೆಯ ನಂತರ ಮಹಿಳೆ ಮನೆಗೆ ಹೋಗಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಮರುದಿನ ಮಹಿಳೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ಅಜರ್ ವಿರುದ್ಧ ಮುಸ್ಲಿಂ ಮಹಿಳೆಯರ ವಿವಾಹ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ರಾಕ್ಷಸನಾದ ಶಿಕ್ಷಕ.. ಮಗ್ಗಿ ಮರೆತ ವಿದ್ಯಾರ್ಥಿ ಕೈ ಡ್ರಿಲ್ ಮಷಿನ್​ನಿಂದ ಕೊರೆದ ಗುರುವಿನ ವಿರುದ್ಧ ತನಿಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.