ETV Bharat / bharat

ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್‌ ರಾಜೀನಾಮೆ

ಇದೀಗ ಇಂದು ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಸಿ, ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ..

Tripura CM Biplab Deb says he has resigned

author img

By

Published : May 14, 2022, 4:38 PM IST

ಅಗರ್ತಲಾ(ತ್ರಿಪುರಾ) : 2018ರಲ್ಲಿ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಿಪ್ಲಬ್​ ಕುಮಾರ್ ದೇವ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲು ಕೇವಲ ಒಂದು ವರ್ಷ ಬಾಕಿ ಇರುವಾಗಲೇ ಈ ಬೆಳವಣಿಗೆ ನಡೆದಿದೆ.

ತಮ್ಮ ರಾಜೀನಾಮೆ ಪತ್ರವನ್ನ ರಾಜ್ಯಪಾಲರಿಗೆ ರವಾನೆ ಮಾಡಿದ್ದಾರೆಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಹೈಕಮಾಂಡ್​ ಸೂಚನೆಯಂತೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವುದಾಗಿ ತಿಳಿದು ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿದ್ದ ಬಿಪ್ಲಬ್​ ಕುಮಾರ್ ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಇಂದು ಸಂಜೆ 5 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಸಿ, ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ತ್ರಿಪುರಾ ಬಿಜೆಪಿಯ ರಾಜ್ಯ ಘಟಕದಲ್ಲಿ ಒಳಜಗಳ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ತ್ರಿಪುರಾ ಉಪ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಇದೀಗ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.