ಹೈದರಾಬಾದ್(ತೆಲಂಗಾಣ): ನಾಳೆ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಟಿಆರ್ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಮಾಹಿತಿ ನೀಡಿದ್ದು, ಮಾರ್ಗರೇಟ್ ಆಳ್ವರಿಗೆ ಮತ ಹಾಕುವಂತೆ ಪಕ್ಷದ 16 ಸಂಸದರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಎರಡೇ ದಿನದ ಹಸುಳೆಯ ಬಾವಿಗೆಸೆದ ಕ್ರೂರಿ; ಮಗು ಜೀವಂತ ಹೊರಬಂದಿದ್ದು ಹೀಗೆ!
ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ನೂತನ ಉಪರಾಷ್ಟ್ರಪತಿ ರೇಸ್ನಲ್ಲಿ ಬಿಜೆಪಿ ಬೆಂಬಲಿತ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನ್ಕರ್ ಹಾಗೂ ಕಾಂಗ್ರೆಸ್ ಬೆಂಬಲಿತ ರಾಜಸ್ಥಾನದ ಮಾಜಿ ರಾಜ್ಯಪಾಲೆ, ಕನ್ನಡತಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ. ಈ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ತಟಸ್ಥ ನೀತಿ ಅನುಸರಿಸುತ್ತಿದೆ. ಎಎಪಿ, ಜೆಎಂಎಂ ಈಗಾಗಲೇ ತನ್ನ ಬೆಂಬಲವನ್ನು ಮಾರ್ಗರೇಟ್ ಆಳ್ವ ಅವರಿಗೆ ಘೋಷಿಸಿದೆ. ಮಾಯಾವತಿ ಎನ್ಡಿಎ ಪಕ್ಷಕ್ಕೆ ಜೈಕಾರ ಹಾಕಿದ್ದಾರೆ.
ಆಗಸ್ಟ್ 6ರಂದು(ನಾಳೆ) ಚುನಾವಣೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳಲಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಟಿಆರ್ಎಸ್ ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಣೆ ಮಾಡಿತ್ತು.