ರಾಯಘಡ (ಮಹಾರಾಷ್ಟ್ರ): ಸುಮಾರು 67 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ 300 ಅಡಿ ಆಳದ ಕಂದಕಕ್ಕೆ ಉರುಳಿರುವ ಘಟನೆ ರಾಯಘಡ ಜಿಲ್ಲೆಯಲ್ಲಿ ನಡೆದಿದೆ.
ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕನಿಷ್ಠ 65ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದರಲ್ಲಿ 34 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ದುರಂತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮದುವೆ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.