ಸೀತಾಪುರ (ಉತ್ತರ ಪ್ರದೇಶ): ಬುಧವಾರ ತಡರಾತ್ರಿ ಟ್ರ್ಯಾಕ್ಟರ್ - ಟ್ರಾಲಿ ಹಾಗೂ ಟ್ರಕ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೀತಾಪುರ ಜಿಲ್ಲೆಯ ಸಿಧೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ - ಟ್ರಾಲಿ ಮಳೆ ಬರುತ್ತಿದ್ದ ಕಾರಣ ರಸ್ತೆ ಬದಿ ನಿಂತಿತ್ತು. ಈ ನಡುವೆ ಎದುರಿನಿಂದ ಬರುತ್ತಿದ್ದ ಟ್ರಕ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ನಲ್ಲಿ ಪ್ರಯಾಣಿಸುತ್ತಿದ್ದವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಹಜೆಹಾನ್‌ಪುರದಿಂದ ಬಾರಾಬಂಕಿಗೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಲಖನೌ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಇತರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಿಧೌಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಯಚೂರು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ.. ತಂದೆ ಮಗ ಸ್ಥಳದಲ್ಲೇ ಸಾವು