ಇಟಾವಾ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಇಟಾವಾದಲ್ಲಿ ಟ್ರಕ್ವೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಇವರು ಟ್ರಕ್ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 35 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಕೆಲವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಟಾವಾ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸಿಂಗ್ ಮಾತನಾಡಿದ್ದು, ಸುಮಾರು 40-45 ಜನರು ಟ್ರಕ್ನಲ್ಲಿದ್ದರು. ಇದರಲ್ಲಿ ಕೆಲ ಮಹಿಳೆಯರು ಹಾಗೂ ಮಕ್ಕಳು ಇದ್ದರು ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನ ಬೇರೆ ಆಸ್ಪತ್ರೆಗಳಿಗೆ ದಾಖಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಚ್ಚಿಬಿದ್ದ ರಾಜಧಾನಿ: ನಡು ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಚುಚ್ಚಿ ಕೊಂದ ಗಂಡ!
ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.