ರಾಯ್ಪುರ್(ಛತ್ತೀಸ್ಗಢ): ದೇಶದಲ್ಲಿ ಎರಡನೇ ಹಂತದ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾವಿರಾರು ಜನರು ಮಹಾಮಾರಿಗೆ ಬಲಿಯಾಗುತ್ತಿದ್ದಾರೆ.
ಛತ್ತೀಸ್ಗಢದಲ್ಲೂ ಮಹಾಮಾರಿ ಅಬ್ಬರ ಜೋರಾಗಿದ್ದು, ನೋರಾರು ಜನರು ಸಾವನ್ನಪ್ಪುತ್ತಿದ್ದಾರೆ. ಇದೀಗ ಮೃತದೇಹಗಳನ್ನ ಶವಾಗಾರಕ್ಕೆ ಹೊತ್ತು ಹೋಗಲು ವಾಹನಗಳ ಸಂಖ್ಯೆ ಕಡಿಮೆಯಾಗಿರುವ ಕಾರಣ, ಟ್ರಕ್ಗಳಲ್ಲಿ ಅವುಗಳನ್ನ ಸಾಗಣೆ ಮಾಡಲಾಗುತ್ತಿದೆ. ರಾಯ್ಪುರ್ ಮುನ್ಸಿಪಲ್ ಕಾರ್ಪೋರೇಷನ್ ಸುಮಾರು 10 ಮೃತದೇಹಗಳನ್ನ ಒಂದೇ ಟ್ರಕ್ನಲ್ಲಿ ಶವಗಾರಕ್ಕೆ ರವಾನೆ ಮಾಡಿದ್ದಾರೆ.
ಇದನ್ನೂ ಓದಿ: ಒಂದೇ ದಿನ 2 ಲಕ್ಷ ಕೋವಿಡ್ ಕೇಸ್ಗೆ ಸಾಕ್ಷಿಯಾದ ಭಾರತ.. ಮತ್ತೆ ಸಾವಿರಕ್ಕೂ ಹೆಚ್ಚು ಮಂದಿ ಬಲಿ
ನವಾ ರಾಯ್ಪುರ್ದ ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಯಿಂದ ಮುಕ್ತಿಧಾಮಕ್ಕೆ ಟ್ರಕ್ನಲ್ಲಿ ಮೃತದೇಹ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲಾಗಿದ್ದು, ಸಾವಿರಕ್ಕೂ ಅಧಿಕ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.