ETV Bharat / bharat

ತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ 300 ರೂ. ಆನ್‌ಲೈನ್‌ ಟಿಕೆಟ್‌ ಬಿಡುಗಡೆ ಮಾಡಿದ ಟಿಟಿಡಿ - ತಿಮ್ಮಪ್ಪನ ವಿಶೇಷ ದರ್ಶನ

ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಟಿಡಿ ಹಂತ ಹಂತವಾಗಿ ಟಿಕೆಟ್‌ಗಳನ್ನು ಬಿಡುಗಡೆ ಮಾಡುತ್ತಿದ್ದು, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ವಿಶೇಷ ದರ್ಶನಕ್ಕಾಗಿ 300 ರೂಪಾಯಿಯ ಆನ್‌ಲೈನ್‌ ಟಿಕೆಟ್‌ ಕೋಟಾವನ್ನು ಇಂದು ಬಿಡುಗಡೆ ಮಾಡಿದೆ. ಸರ್ವದರ್ಶನದ ಟಿಕೆಟ್‌ಗಳನ್ನು ಶನಿವಾರ ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿ ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

TTD Releases November and December Quota Of Rs.300 Special Darshan Tickets
ತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ 300 ರೂ. ಆನ್‌ಲೈನ್‌ ಟಿಕೆಟ್‌ ಬಿಡುಗಡೆ ಮಾಡಿದ ಟಿಟಿಡಿ
author img

By

Published : Oct 22, 2021, 4:01 PM IST

ತಿರುಮಲ(ಆಂಧ್ರಪ್ರದೇಶ): ಕೋವಿಡ್‌ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆ ಹಂತ ಹಂತವಾಗಿ ಅವಕಾಶ ಕಲ್ಪಿಸಲಾಗುತ್ತಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ ಆನ್‌ಲೈನ್‌ ಮೂಲಕ ಕಾಯ್ದಿರಿಸುವ 300 ರೂಪಾಯಿಯ ಟಿಕೆಟ್‌ ಕೋಟಾವನ್ನು ಇಂದು ಬಿಡುಗಡೆ ಮಾಡಿದೆ.

ಸದ್ಯ ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳ ಆನ್‌ಲೈನ್‌ ಟಿಕೆಟ್‌ಗಳ ಬುಕ್ಕಿಂಗ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್‌ಗಳನ್ನು ವರ್ಚುಯಲ್‌ ಮಾದರಿಯಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ಆನ್‌ಲೈನ್‌ ಮೂಲಕ ಟಿಕೆಟ್‌ಗಳನ್ನು ಬಿಡುಗಡೆ ಮಾಡಲಾಗಿದೆ. ನಿತ್ಯ 12 ಸಾವಿರ ಟೋಕನ್‌ಗಳು ಲಭ್ಯ ಇದೆ. ಸರ್ವದರ್ಶನ ಟಿಕೆಟ್‌ಗಳನ್ನು ಶನಿವಾರ ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಇದು ಕೇವಲ ನವೆಂಬರ್‌ ತಿಂಗಳ ಟಿಕೆಟ್‌ಗಳನ್ನು ಮಾತ್ರ ನೀಡುವುದಾಗಿ ಟಿಟಿಡಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.