ETV Bharat / bharat

ತನ್ನ ಉದ್ಯೋಗಿಗಳ ಹಾಗೂ ಕುಟುಂಬಸ್ಥರ ಕೊರೊನಾ ಲಸಿಕೆ ವೆಚ್ಚ ಭರಿಸಲಿರುವ TVS - ಕೋವಿಡ್​ ವ್ಯಾಕ್ಸಿನೇಷನ್​

ನಮ್ಮ ಕಂಪನಿಯ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಪ್ರಯತ್ನವನ್ನು ನಾವು ಮುಂದುವರೆಸಿದ್ದು, ಅವರಿಗೆ ಉಚಿತವಾಗಿ ಕೋವಿಡ್​ ಲಸಿಕೆ ಸಿಗುವಂತೆ ಮಾಡಲು ನಿರ್ಧರಿಸಿದ್ದೇವೆ ಎಂದು ಟಿವಿಎಸ್ ಕಂಪನಿ ಹೇಳಿದೆ.

TVS offers free vaccination
ಟಿವಿಎಸ್
author img

By

Published : Mar 6, 2021, 4:58 PM IST

ನವದೆಹಲಿ: ದೇಶಾದ್ಯಂತ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಯಶಸ್ವಿಯಾಗಿ ಸಾಗುತ್ತಿದ್ದು, ಟಿವಿಎಸ್ ಮೋಟಾರ್ ಕಂಪನಿಯು ತನ್ನ ಉದ್ಯೋಗಿಗಳ ಹಾಗೂ ಅವರ ಕುಟುಂಬಸ್ಥರ ಲಸಿಕೆಯ ವೆಚ್ಚ ಭರಿಸುವುದಾಗಿ ತಿಳಿಸಿದೆ.

ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ದೇಶಾದ್ಯಂತ 35,000 ಕಂಪನಿ ಉದ್ಯೋಗಿಗಳಿಗೆ ಪ್ರಸ್ತುತ ನಡೆಯುತ್ತಿರುವ ಲಸಿಕಾಭಿಯಾನದಲ್ಲಿ ವ್ಯಾಕ್ಸಿನ್​ ನೀಡಲಾಗುವುದು. ನಮ್ಮ ಕಂಪನಿಯ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಪ್ರಯತ್ನವನ್ನು ನಾವು ಮುಂದುವರೆಸಿದ್ದು, ಅವರಿಗೆ ಉಚಿತವಾಗಿ ಕೋವಿಡ್​ ಲಸಿಕೆ ಸಿಗುವಂತೆ ಮಾಡಲು ನಿರ್ಧರಿಸಿದ್ದೇವೆ ಎಂದು ಟಿವಿಎಸ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಆರ್. ಆನಂದ್​ ಕೃಷ್ಣನ್ ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್​ ಕಂಪನಿ ಉದ್ಯೋಗಿಗಳು & ಕುಟುಂಬಸ್ಥರಿಗೆ ಲಸಿಕಾ ವೆಚ್ಚ ನೀಡ್ತೀವಿ: ನೀತಾ ಅಂಬಾನಿ ಘೋಷಣೆ

ಭಾರತದಲ್ಲಿ 2ನೇ ಹಂತಹ ಕೊರೊನಾ ವ್ಯಾಕ್ಸಿನೇಷನ್​ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 1,94,97,704 ಮಂದಿಗೆ ಲಸಿಕೆ ನೀಡಲಾಗಿದೆ.

ಈ ಹಿಂದೆ ರಿಲಯನ್ಸ್​ ಹಾಗೂ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್ ಮತ್ತು ಅಕ್ಸೆಂಚರ್ ಕೂಡ ತಮ್ಮ ಉದ್ಯೋಗಿಗಳು ಹಾಗೂ ಅವರ ಅವಲಂಬಿತರಗೆ ಲಸಿಕಾ ವೆಚ್ಚ ಭರಿಸುವುದಾಗಿ ತಿಳಿಸಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.