ನವದೆಹಲಿ: ಟೂಲ್ ಕಿಟ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬೆಂಗಳೂರಿಗೆ ತೆರಳಿ, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿಯವರನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಕೋವಿಡ್-19 ಟೂಲ್ ಕಿಟ್ ಆರೋಪದ ತನಿಖೆಗೆ ಸಂಬಂಧಿಸಿದ ವಿಚಾರಣೆಗಾಗಿ ಟ್ವಿಟರ್ಗೆ ವಿಶೇಷ ಘಟಕದಿಂದ ನೋಟಿಸ್ ಕಳುಹಿಸಲಾಗಿತ್ತು. ಬಿಜೆಪಿ ಮುಖಂಡ ಸಂಬೀತ್ ಪಾತ್ರ ತಿರುಚಿರುವ ಟ್ವೀಟ್ ಬಗ್ಗೆ ಸ್ಪಷ್ಟನೆ ನೀಡುವಂತೆ ಮೈಕ್ರೋಬ್ಲಾಗಿಂಗ್ ಸೈಟ್ ಗೆ ಕೇಳಲಾಗಿತ್ತು.
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ದೆಹಲಿ ಪೊಲೀಸರ ವಿಶೇಷ ತಂಡ ಮೇ.31 ರಂದು ಬೆಂಗಳೂರಿಗೆ ಆಗಮಿಸಿ ಮನೀಶ್ ಮಹೇಶ್ವರಿ ಅವರನ್ನು ವಿಚಾರಣೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಟೂಲ್ಕಿಟ್ ಪ್ರಕರಣ: ಟ್ಟಿಟರ್ ಕಚೇರಿಗೆ ಭೇಟಿ ನೀಡಿದ ದೆಹಲಿ ಪೊಲೀಸರು
ಮಾಹಿತಿ ಪ್ರಕಾರ ಟೂಲ್ಕಿಟ್ ಅನ್ನು ಬಿಜೆಪಿ ನಾಯಕ ಸಂಬೀತ್ ಪಾತ್ರ ಟ್ವೀಟ್ ಮಾಡಿದ್ದರು. ಆದರೆ, ಇದನ್ನು ಕಾಂಗ್ರೆಸ್ ಸಿದ್ಧಪಡಿಸಿದ್ದಾರೆ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದರು. ಪ್ರಸ್ತುತ, ಈ ಸಂಬಂಧ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಇದಲ್ಲದೇ, ಮೇ 24 ರಂದು ಲಾಡೋ ಸರಾಯ್, ದೆಹಲಿ ಮತ್ತು ಗುರಗಾಂವ್‌ನಲ್ಲಿರುವ ಟ್ವಿಟರ್ ಇಂಡಿಯಾ ಕಚೇರಿಗಳಿಗೆ ಪೊಲೀಸರು ದಾಳಿ ನಡೆಸಿದ್ದರು.