ETV Bharat / bharat

Video : ₹500 ರೂಪಾಯಿ ಆಸೆಗೆ ಆಸ್ಪತ್ರೆಯಲ್ಲೇ ಹೊಡೆದಾಡಿಕೊಂಡ ಆಶಾ ಕಾರ್ಯಕರ್ತೆಯರು!

author img

By

Published : Jan 24, 2022, 4:26 PM IST

Health Workers Fight : 500 ರೂಪಾಯಿ ವಿಚಾರವಾಗಿ ಆಸ್ಪತ್ರೆಯಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಅದರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ..

Two Asha workers fight
Two Asha workers fight

ಪಾಟ್ನಾ(ಬಿಹಾರ) : ಆಗ ತಾನೇ ಹುಟ್ಟಿರುವ ಮಗುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅದರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಲಕ್ಷ್ಮಿಪುರ ಬ್ಲಾಕ್​​​ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಮಗುವೊಂದು ಜನಸಿದೆ. ಈ ವೇಳೆ ಆಶಾ ಕಾರ್ಯಕರ್ತೆ ರಿಂತು ಕುಮಾರಿ ಮಗುವಿಗೆ ಚುಚ್ಚು ಮದ್ದು ನೀಡಲು ಮತ್ತೋರ್ವ ಆಶಾ ಕಾರ್ಯಕರ್ತೆ ರಂಜನಾ ಕುಮಾರಿ ಅವರನ್ನ ಸಂಪರ್ಕಿಸಿದ್ದಾಳೆ.

ಈ ವೇಳೆ ಲಸಿಕೆ ನೀಡಲು ನರ್ಸ್​​ 500 ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು ಆಶಾ ಕಾರ್ಯಕರ್ತೆ ರಂಜನಾ ತಿಳಿಸಿದ್ದಾಳೆ. ಈ ವಿಚಾರವಾಗಿ ವಾಗ್ವಾದ ನಡೆದಿದ್ದು, ಇಬ್ಬರು ಹೊಡೆದಾಡಿಕೊಂಡಿದ್ದಾರೆ.

ಆಸ್ಪತ್ರೆಯಲ್ಲೇ ಹೊಡೆದಾಡಿಕೊಂಡ ಇಬ್ಬರು ಆಶಾ ಕಾರ್ಯಕರ್ತೆಯರು

ಇದನ್ನೂ ಓದಿರಿ: ದೇಶದ ಗಡಿಯೊಳಗೆ ನುಗ್ಗಲು 135 ಉಗ್ರರ ಸಂಚು.. ಗಣರಾಜ್ಯೋತ್ಸವ ಹಿನ್ನೆಲೆ ಬೆದರಿಕೆ ಕರೆ, ಸೇನೆ ಹೈಅಲರ್ಟ್​

ಇಬ್ಬರು ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ಆಸ್ಪತ್ರೆಯಲ್ಲಿನ ವ್ಯಕ್ತಿಯೋರ್ವ ಅದರ ವಿಡಿಯೋ ಸೆರೆ ಹಿಡಿದಿದ್ದಾರೆ. ಘಟನೆಯ ವಿಡಿಯೋ ವೈದ್ಯಾಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ತನಿಖೆ ನಡೆಸಲು ಸೂಚನೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆಶಾ ಕಾರ್ಯಕರ್ತೆ ರಂಜನಾ, ನನ್ನ ಮೇಲೆ ಕೇಳಿ ಬಂದಿರುವ ಆರೋಪ ನಿರಾಧಾರ. ಭಾನುವಾರ ನವಜಾತು ಶಿಶುವಿಗೆ ಲಸಿಕೆ ನೀಡಬಾರದು ಎಂಬ ನಿಯಮವಿದೆ. ಆದರೂ, ಲಸಿಕೆ ನೀಡಲು ಒತ್ತಾಯಿಸಲಾಗುತ್ತಿತ್ತು. ಇದೇ ವಿಚಾರವಾಗಿ ಜಗಳವಾಗಿದೆ ಎಂದಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.