ನವದೆಹಲಿ: ಇಹಲೋಕ ತ್ಯಜಿಸಿರುವ ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ಸಂತಾಪ ಸೂಚಿಸುವ ಸಲುವಾಗಿ ಎರಡು ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಅಷ್ಟೇ ಅಲ್ಲ, ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಹಾರಿಸಲು ಭಾರತ ಸರ್ಕಾರ ಸೂಚನೆ ನೀಡಿದೆ. ಭಾನುವಾರ ಸಂಜೆ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜೀವಂತ ದಂತಕತೆ ಲತಾ ಅವರ ಅಂತ್ಯಕ್ರಿಯೆ ನೆರವರಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಮುಂಬೈನ ಶಿವಾಜಿ ಪಾರ್ಕ್‌ಗೆ ತೆರಳಿ, ಗಾಯಕಿಗೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಇದನ್ನೂ ಓದಿ: ಸಹೋದರ ಹೃದಯನಾಥ್ ಮಂಗೇಶ್ಕರ್ ನಿರ್ದೇಶನದಲ್ಲಿ ಗಾನ ಕೋಗಿಲೆಯ ದನಿ
ಅನಾರೋಗ್ಯದಿಂದ ಬಳಲುತ್ತಿದ್ದ ಲತಾ ಮಂಗೇಶ್ಕರ್ ಅವರು ತಮ್ಮ 92ನೇ ವಯಸ್ಸಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾನಸುಧೆಯ ನಿಧನಕ್ಕೆ ಭಾರತ ಚಿತ್ರರಂಗ ಮಾತ್ರವಲ್ಲ, ಎಲ್ಲಾ ಕ್ಷೇತ್ರಗಳ ಗಣ್ಯರೂ ಸಂತಾಪ ಸೂಚಿಸಿದ್ದಾರೆ.