ETV Bharat / bharat

ತೆಲಂಗಾಣ: ಎರಡಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ - ಎರಡಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ

ತೆಲಂಗಾಣದ ಯಾದಗಿರಿಗುಟ್ಟದಲ್ಲಿನ ಎರಡಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.

Two Floor building collapsed
Two Floor building collapsed
author img

By

Published : Apr 29, 2022, 8:11 PM IST

ಯಾದಗಿರಿಗುಟ್ಟ(ತೆಲಂಗಾಣ): ಎರಡಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ತೆಲಂಗಾಣದ ಯಾದಗಿರಿಗುಟ್ಟದಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾಗಿ ತಿಳಿದು ಬಂದಿದೆ.

ಎರಡಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ

ಕುಸಿತಗೊಂಡಿರುವ ಬಿಲ್ಡಿಂಗ್​​ನಲ್ಲಿ ಅನೇಕ ಅಂಗಡಿ, ಹಾಗೂ ಕುಟುಂಬಗಳು ವಾಸವಾಗಿದ್ದವು ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗ್ತಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಭುವನಗಿರಿ ಏರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ 30 ವರ್ಷಗಳ ಹಿಂದೆ ಈ ಬಿಲ್ಡಿಂಗ್ ಕಟ್ಟಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.