ಮೈಲವರಂ (ಆಂಧ್ರಪ್ರದೇಶ): ಕೃಷ್ಣ ಜಿಲ್ಲೆಯ ಮೈಲವರಂ ಎಂಬ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಹಳೇ ದ್ವೇಷದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿರುವುದಾಗಿ ತಿಳಿದು ಬಂದಿದ್ದು, ವಾಲಿಬಾಲ್ ಆಡುತ್ತಿದ್ದ ವೇಳೆ ಪಾಂಡುಗುಲ ಎಂಬ ಗ್ರಾಮದಲ್ಲಿ ಗಲಭೆ ಭುಗಿಲೆದ್ದಿದೆ. ಯುವಕರು ಪರಸ್ಪರ ಕೋಲುಗಳು ಮತ್ತು ಕಲ್ಲುಗಳಿಂದ ಹೊಡೆದಾಡಿಕೊಂಡಿದ್ದು, ಈ ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ.
ಇನ್ನು ಈ ಗಲಭೆಯಲ್ಲಿ 10 ಜನರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿ ಪಡೆದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.