ETV Bharat / bharat

ಮಹಾರಾಷ್ಟ್ರ ಬಂಡಾಯ ಶಾಸಕರಿದ್ದ ಹೋಟೆಲ್​​ನಲ್ಲಿ ಸುಳ್ಳು ದಾಖಲೆ ನೀಡಿ ವಾಸ್ತವ್ಯ, ಇಬ್ಬರ ಬಂಧನ

ರಾಜಕೀಯ ಪಕ್ಷಕ್ಕೆ ಸೇರಿದವರು ಎಂದು ಸುಳ್ಳು ದಾಖಲೆ ನೀಡಿ ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಓರ್ವ ಮಹಿಳೆ, ಪುರುಷನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಬಂಡಾಯ ಶಾಸಕರಿದ್ದ ಹೋಟೆಲ್​​ನಲ್ಲಿ ಸುಳ್ಳು ದಾಖಲೆ ನೀಡಿ ವಾಸ್ತವ್ಯ ಹೂಡಿದ ಇಬ್ಬರ ಬಂಧನ

author img

By

Published : Jul 3, 2022, 7:24 AM IST

ಪಣಜಿ(ಗೋವಾ): ಮಹಾರಾಷ್ಟ್ರ ಬಂಡಾಯ ಶಾಸಕರು ತಂಗಿದ್ದ ಡೊನಾ ಪೌಲಾದ ಸ್ಟಾರ್​ ಹೋಟೆಲ್​ನಲ್ಲಿ ತಾವು ರಾಜಕೀಯ ಪಕ್ಷಕ್ಕೆ ಸೇರಿದವರು ಎಂದು ಸುಳ್ಳು ಹೇಳಿ ವಾಸ್ತವ್ಯ ಹೂಡಿದ್ದ ಮಹಿಳೆ, ಓರ್ವ ವ್ಯಕ್ತಿಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಶಿವಸೇನೆಯ ಬಂಡಾಯ ನಾಯಕ ಏಕನಾಥ್​ ಶಿಂಧೆ ಮತ್ತು ಅವರ ಬಣದ 50 ಶಾಸಕರು ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಹೋಟೆಲ್​ಗೆ ಬಿಗಿ ಭದ್ರತೆ ನೀಡಲಾಗಿತ್ತು. ಸಾರ್ವಜನಿಕರು, ಮಾಧ್ಯಮದವರಿಗೂ ಪ್ರವೇಶ ನಿಷೇಧಿಸಲಾಗಿತ್ತು.

ಆರೋಪಿಗಳು ತಾವು ರಾಜಕೀಯ ಪಕ್ಷಕ್ಕೆ ಸೇರಿದವರು ಎಂದು ಹೇಳಿ ಹೋಟೆಲ್​ನಲ್ಲಿ ಒಂದು ದಿನ ತಂಗಿದ್ದರು. ತಪಾಸಣೆ ನಡೆಸಿದಾಗ ಸುಳ್ಳು ದಾಖಲೆ ನೀಡಿದ್ದು ಗೊತ್ತಾಗಿ ಮಹಿಳೆ ಮತ್ತು ಪುರುಷನನ್ನು ಪೊಲೀಸರು ಬಂಧಿಸಿದ್ದಾರೆ.

"ಹೋಟೆಲ್​ ಸುತ್ತ ನಿರ್ಬಂಧ ಹೇರಿದಾಗ್ಯೂ ಇಬ್ಬರೂ ನಕಲಿ ದಾಖಲೆ ನೀಡಿ ಒಂದು ದಿನ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ರಾಜಕೀಯ ವ್ಯಕ್ತಿಗಳ ಸೋಗಿನಲ್ಲಿ ವಂಚಿಸಿದ ಕಾರಣ ಅವರನ್ನು ಬಂಧಿಸಲಾಗಿದೆ" ಎಂದು ಪಣಜಿ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದರು.

ಬಂಧಿತರ ಹೆಸರು, ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಗೋವಾದಲ್ಲಿ ತಂಗಿದ್ದ ಶಿವಸೇನೆ ಬಂಡಾಯ ಶಾಸಕರು ನಿನ್ನೆ ಮಹಾರಾಷ್ಟ್ರಕ್ಕೆ ಮರಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಕರ್ನಾಟಕ ಶಾಸಕನ ಮತ ಮೌಲ್ಯ 131; ಲೆಕ್ಕಾಚಾರ ಹೀಗಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.