ETV Bharat / bharat

ಅಕ್ರಮ ಮರಳುಗಾರಿಕೆ: ಎರಡು ಗುಂಪುಗಳ ನಡುವೆ ಗುಂಡಿನ ದಾಳಿ.. ಇಬ್ಬರು ಬಲಿ!

ಬಿಹಾರದ ಭೋಜ್‌ಪುರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಬಲಿಯಾಗಿದ್ದಾರೆ.

Two killed in firing over illegal sand mining in bihar
ಬಿಹಾರದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ದಾಳಿ
author img

By

Published : Jan 22, 2022, 3:09 PM IST

ಭೋಜ್​​​ಪುರ್​​ (ಬಿಹಾರ): ಕೊಯಿಲ್ವಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದವರಿಂದ ಗುಂಡಿನ ಸದ್ದು ಕೇಳಿಬಂದಿದೆ. ಶುಕ್ರವಾರ ಮಧ್ಯಾಹ್ನ ಬಿಹಾರದ ಭೋಜ್‌ಪುರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮರಳು ಗಣಿಗಾರಿಕೆ ವಿಚಾರವಾಗಿ ಎರಡೂ ಗ್ಯಾಂಗ್‌ಗಳು ಭೀಕರವಾಗಿ ಗುಂಡು ಹಾರಿಸಿಕೊಂಡಿದ್ದು, ಗುಂಡು ತಗುಲಿ ಬ್ಯಾಂಕ್ ಉದ್ಯೋಗಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಹೇಗೋ ಪಾರಾಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಈ ಭೀಕರ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್​​ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ವೈರಲ್​​ ಆಗಿದೆ. ​​

ಬಿಹಾರದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ದಾಳಿ - ವೈರಲ್​ ವೀಡಿಯೋ

ಶುಕ್ರವಾರ ಮಧ್ಯಾಹ್ನ ನಡೆದ ಈ ಘಟನೆ ನಂತರ ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಘಟನೆ ಕುರಿತು ಮಾಹಿತಿ ಪಡೆದ ಕೊಯಿಲ್ವಾರ್​ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಶವಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: Shocking: ಯುವತಿಯರ ಹಾಸ್ಟೆಲ್​ ಎದುರೇ ಬೈಕ್​ನಲ್ಲಿ ಕುಳಿತುಕೊಂಡು ಹಸ್ತಮೈಥುನ..!

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕೊಯಿಲ್ವಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾಗವೊಂದನ್ನು ಕೊಂಡುಕೊಂಡವರು ಮರಳು ಗಣಿಗಾರಿಕೆ ಪ್ರಾರಂಭಿಸುವ ಸಲುವಾಗಿ ಆ ಜಾಗಕ್ಕೆ ತೆರಳಿದ್ದಾರೆ. ಆಗ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದವರು ಗುಂಡಿನ ದಾಳಿ ನಡೆಸಿದ್ದು, ನಂತರ ಎರಡೂ ಕಡೆಯವರಿಂದ ದಾಳಿ ನಡೆದಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಮನಬಂದಂತೆ ಗುಂಡು ಹಾರಿಸಿ, ಇಬ್ಬರನ್ನು ಗುಂಡಿಕ್ಕಿ ಕೊಂದರು ಎಂದು ತಿಳಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.