ETV Bharat / bharat

ಘಾಜಿಯಾಬಾದ್ ಕಟ್ಟಡದ ಮೇಲ್ಛಾವಣಿ ಕುಸಿತ: ಗುತ್ತಿಗೆದಾರ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಘಾಜಿಯಾಬಾದ್ ಕಟ್ಟಡ ಕುಸಿತ- ಗುತ್ತಿಗೆದಾರ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ- ಮುಂದುವರೆದ ಕಾರ್ಯಾಚರಣೆ

author img

By

Published : Feb 20, 2023, 11:00 AM IST

collapse
ಘಾಜಿಯಾಬಾದ್ ಕಟ್ಟಡ ಕುಸಿತ

ಘಾಜಿಯಾಬಾದ್ (ಉತ್ತರ ಪ್ರದೇಶ): ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದ ಪರಿಣಾಮ ಗುತ್ತಿಗೆದಾರ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ದೆಹಲಿ ಸಮೀಪದ ಘಾಜಿಯಾಬಾದ್​ನ ಲೋನಿ ಪಟ್ಟಣದ ರೂಪ್​ ನಗರ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಈ ಬಗ್ಗೆ ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ 10 ಮಂದಿಯನ್ನು ಹೊರತೆಗೆಯಲಾಗಿದೆ. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಕಾರ್ಮಿಕರು ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​) ನೆರವಿನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಅವಶೇಷಗಳಡಿ ಯಾರೂ ಸಿಲುಕಿಲ್ಲ ಎಂಬುದಾಗಿ ಖಚಿತಪಡಿಸಿಕೊಳ್ಳುತ್ತಿದ್ದಾರೆ. ಗಾಯಗೊಂಡಿರುವ ಕಾರ್ಮಿಕರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟ ಗುತ್ತಿಗೆದಾರನ ಮಕ್ಕಳ ಮದುವೆ ಇತ್ತೀಚೆಗೆ ನಡೆದಿತ್ತು. ಇದೀಗ ಒಂದು ತಿಂಗಳ ಬಳಿಕ ಈ ದುರಂತ ಸಂಭವಿಸಿದೆ.

ನನ್ನ ಅಂಕಲ್​ ಗುತ್ತಿಗೆದಾರರಾಗಿದ್ದರು. ಅವರು ಕಟ್ಟಡದ ಗೋಡೆಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಸ್ಕ್ಯಾಫೋಲ್ಡಿಂಗ್​ ಕುಸಿದಿದ್ದು, ಅದರಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಅವರ ಇಬ್ಬರು ಮಕ್ಕಳಿಗೆ ಜನವರಿ ತಿಂಗಳಲ್ಲಿ ವಿವಾಹವಾಗಿತ್ತು. ಈಗ ಅವರು ಲೋನಿಯ ಪ್ರೇಮ್​ನಗರದಲ್ಲಿ ವಾಸಿಸುತ್ತಿದ್ದಾರೆ ಎಂದು ಮೃತ ಗುತ್ತಿಗೆದಾರರ ಸೋದರಳಿಯ ತಿಳಿಸಿದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.

ಇದನ್ನೂ ಓದಿ: ಯುಪಿ ಜೈಲುಗಳಲ್ಲಿ ಇರುವ ಟಾಪ್ 10 ಕ್ರಿಮಿನಲ್‌ಗಳ ಪಟ್ಟಿ ತಯಾರಿಕೆಗೆ ಸೂಚನೆ.. 24 ಗಂಟೆಗಳ ನಿಗಾಕ್ಕೆ ಯೋಗಿ ನಿರ್ದೇಶನ

ಇನ್ನು ಗಾಯಗೊಂಡಿರುವ ಕಾರ್ಮಿಕ, ಮೃತ ಗುತ್ತಿಗೆದಾರರ ಮಗ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಸ್ಕ್ಯಾಫೋಲ್ಡಿಂಗ್​ ಮೇಲೆ ನಿಂತಿದ್ದೆ. ಅದು ಕುಸಿದು ನನ್ನ ತಂದೆಯ ಮೇಲೆ ಬಿದ್ದಿದ್ದು ಅವರು ಸಾವನ್ನಪ್ಪಿದ್ದಾರೆ. ನನ್ನ ಕಾಲುಗಳಿಗೆ ಗಾಯಗಳಾಗಿದ್ದು, ಈ ವೇಳೆ ಅಲ್ಲೇ ಇದ್ದ ನಿವೇಶನದ ಕಾರ್ಮಿಕರಿಗೂ ಗಾಯಗಳಾಗಿವೆ. ಗಾಯಗೊಂಡ ಹೆಚ್ಚಿನ ಕಾರ್ಮಿಕರು ಜಾರ್ಖಂಡ್​ ಮೂಲದವರಾಗಿದ್ದಾರೆ ಎಂದು ತಿಳಿಸಿದರು. ಸೈಟ್​ನಲ್ಲಿ ಕೆಲಸ ಮಾಡುವ ಕಾರ್ಮಿಕರೆಲ್ಲರೂ ಹತ್ತಿರದ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.

ಮೂರು ಅಂತಸ್ತಿನ ಕಟ್ಟಡ ಕುಸಿತ: ಇತ್ತೀಚೆಗೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಪರಿಣಾಮ ಮೂವರು ಸಾವನ್ನಪ್ಪಿದ್ದರು. ಎನ್​ಡಿಆರ್​ಎಫ್​ ಮತ್ತು ಮುನ್ಸಿಪಲ್​ ಕಾರ್ಪೋರೇಷನ್​ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಕೆಲವರನ್ನು ಹೊರತಂದು ಆಸ್ಪತ್ರೆಗೆ ದಾಖಲಿಸಿದ್ದರು. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದರು. ಆ ದಿನದಂದೇ ಉತ್ತರ ಪ್ರದೇಶದ ಕೆಲವೆಡೆ ಪ್ರಬಲ ಭೂಕಂಪನದ ಅನುಭವವಾಗಿತ್ತು. 15 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆಯು ರಿಕ್ಟರ್​ ಮಾಪಕದಲ್ಲಿ 5.8 ದಾಖಲಾಗಿತ್ತು.

ಇದನ್ನೂ ಓದಿ: ನಿಕ್ಕಿ ಯಾದವ್​ ಹತ್ಯೆ ಪ್ರಕರಣ: ವಿವಾಹ ಸಾಕ್ಷಿ ಪಡೆಯಲು ಆರೋಪಿಯೊಂದಿಗೆ ಆರ್ಯ ಸಮಾಜ ಮಂದಿರಕ್ಕೆ ತೆರಳಿದ್ದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.