ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ದೊರೆತ ನಂತರ ಶೋಪಿಯಾನ್‌ನ ಕಂಜಿಯುಲಾರ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ, ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನ ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಹತರಾದ ಉಗ್ರರಲ್ಲಿ ಒಬ್ಬನನ್ನು ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದ್ದು, ಈತ ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಶ್ರೀನಗರದಲ್ಲಿ ಎನ್‌ಕೌಂಟರ್: ಎಲ್ಇಟಿಯ ಇಬ್ಬರು ಉಗ್ರರ ಹತ್ಯೆ