ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ) ಸಂಘಟನೆಯ ಉಗ್ರರನ್ನು ಬಂಧಿಸಿದ ಬಳಿಕ, ಕುಲ್ಗಾಮ್ ಜಿಲ್ಲೆಯ ದೇವ್ಸರ್ ಪ್ರದೇಶದಲ್ಲಿ ಲಷ್ಕರ್ -ಇ- ತೊಯ್ಬಾ(ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ದೇವ್ಸರ್ನ ಚೆಯಾನ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ತಿಳಿದ ಪೊಲೀಸರು, ಮತ್ತು ಸಿಆರ್ಪಿಎಫ್ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಯೋಧರೂ ಸಹ ಪ್ರತಿದಾಳಿ ನಡೆಸಿದರು.
ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಇದರಲ್ಲಿ ಒಬ್ಬ ವಿದೇಶಿಗನೂ ಇದ್ದಾನೆ. ಹತನಾದ ಎಲ್ಇಟಿ ಉಗ್ರನನ್ನು ಹೈದರ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ ಬಳಿಕ ಸ್ಥಳದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.