ETV Bharat / bharat

ಆಸೆ ಈಡೇರಿಸುವಂತೆ ಪೀಡಿಸಿ, ಯುವತಿ ಮೇಲೆ ವ್ಯಕ್ತಿಯಿಂದ ಹಲ್ಲೆ... ವಿಡಿಯೋ ವೈರಲ್​!

ಯುವತಿಯೋರ್ವಳ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ಮಾಡಿರುವ ಘಟನೆಯ ವಿಡಿಯೋವೊಂದು ಇದೀಗ ವೈರಲ್​​ ಆಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

assualting women
assualting women
author img

By

Published : Sep 15, 2021, 8:51 PM IST

ನೆಲ್ಲೂರು(ಆಂಧ್ರಪ್ರದೇಶ): ನಿರ್ಜನ ಪ್ರದೇಶದಲ್ಲಿ ಯುವತಿಯೋರ್ವಳ ಮೇಲೆ ವ್ಯಕ್ತಿ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ರಾಮಕೋಟಯ್ಯನಗರದ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದ್ದಾಗಿ ತಿಳಿದು ಬಂದಿದೆ.

ಯುವತಿಯೋರ್ವಳ ಮೇಲೆ ಅಮಾನವೀಯ ರೀತಿ ಹಲ್ಲೆ

ಏನಿದು ಪ್ರಕರಣ?

ನೆಲ್ಲೂರಿನ ಯುವತಿ(ಹಲ್ಲೆಗೊಳಗಾದ ಯುವತಿ) ಹಾಗೂ ವೆಂಕಟೇಶ್​ ಕಳೆದ ಕೆಲ ವರ್ಷಗಳಿಂದ ಸ್ನೇಹಿತರಾಗಿದ್ದರು. ವೆಂಕಟೇಶ್​ನ ಇತ್ತೀಚಿನ ನಡವಳಿಕೆಯಿಂದ ಆಕೆ ದೂರವಿರಲು ಶುರು ಮಾಡಿದ್ದಳು. ಇದರಿಂದ ಆಕ್ರೋಶಗೊಂಡಿರುವ ವ್ಯಕ್ತಿ ವೆಂಕಟೇಶ್​ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನ ಸ್ನೇಹಿತ ಶಿವಕುಮಾರ್​​ ಇದರ ವಿಡಿಯೋ ಸೆರೆ ಹಿಡಿದಿದ್ದಾನೆ.

ನಿರ್ಜನ ಪ್ರದೇಶಕ್ಕೆ ಕರೆದುಕೊಂಡ ಬಂದಿರುವ ವೇಳೆ ತನ್ನ ಆಸೆ ಈಡೇರಿಸುವಂತೆ ಪೀಡಿಸಿದ್ದಾನೆಂದು ಹೇಳಲಾಗುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕತ್ತಲಿನಿಂದ ಬೆಳಕಿನೆಡೆಗೆ.. ಪ್ರಿಯತಮೆಯನ್ನು 10 ವರ್ಷ ಕೋಣೆಯಲ್ಲಿ ಬಚ್ಚಿಟ್ಟ ವ್ಯಕ್ತಿ ಕೊನೆಗೂ ಮದುವೆಯಾದ!

ಕಳೆದ ಎರಡು ತಿಂಗಳ ಹಿಂದೆ ನಡೆದಿರುವ ಘಟನೆ ಇದಾಗಿದ್ದು ಇತ್ತೀಚೆಗೆ ಬೆಳಕಿಗೆ ಬಂದಿದೆ ಎನ್ನಲಾಗುತ್ತಿದೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ತಕ್ಷಣವೇ ಎಚ್ಚೆತ್ತುಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದು, ಅವರ ವಿರುದ್ಧ ರೌಡಿಶೀಟರ್​ ಕೇಸ್ ಓಪನ್​ ಮಾಡುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.