ETV Bharat / bharat

ಕುಲ್ಗಾಮ್​ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ - ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಕೌಂಟರ್

ಕುಲ್ಗಾಮ್ ಜಿಲ್ಲೆಯ ನವಪುರ ಮೀರ್ ಬಜಾರ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಸುಳಿವಿನ ಮೇರೆಗೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

two-militants-killed-in-kulgam-encounter
ಕುಲ್ಗಾಮ್​ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ
author img

By

Published : Jun 29, 2022, 7:05 PM IST

ಕುಲ್ಗಾಮ್ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕುಲ್ಗಾಮ್ ಜಿಲ್ಲೆಯ ನವಪುರ ಮೀರ್ ಬಜಾರ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ಇಲ್ಲಿನ ಉಗ್ರರು ಅಡಗಿದ್ದಾರೆ ಎಂಬ ಸುಳಿವಿನ ಮೇರೆಗೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಲು ಪ್ರಯತ್ನಿಸಿದರು ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.

ಆದರೆ, ಭದ್ರತಾ ಪಡೆಗಳು ಭಯೋತ್ಪಾದಕರಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಲಿಲ್ಲ. ಇದರಿಂದ ಎರಡು ಕಡೆ ಗುಂಡಿನ ಚಕಮಕಿ ನಡೆಯಿತು. ಜೊತೆಗೆ ಸುತ್ತ-ಮುತ್ತಲಿನ ಪ್ರದೇಶಗಳನ್ನು ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಸುತ್ತುವರಿದರು. ಯಾವ ಕಡೆಯಿಂದಲೂ ಉಗ್ರರು ತಪ್ಪಿಸಿಕೊಳ್ಳದಂತೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವ್ಯಕ್ತಿಯ ಶಿರಚ್ಛೇದಿಸಿದ ಹಂತಕರನ್ನು 13 ಕಿ.ಮೀ ದೂರ ಬೆನ್ನಟ್ಟಿ ಹಿಡಿದ ಪೊಲೀಸರು- ವಿಡಿಯೋ​ ನೋಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.