ETV Bharat / bharat

ಬಾಲಕಿಯರ ಮೇಲೆ ಅತ್ಯಾಚಾರ: ಓರ್ವನ ಬಂಧನ.. ಗುಜರಾತ್​​ನಲ್ಲಿ ಹೃದಯಾಘಾತಕ್ಕೆ ಬಾಲಕಿ ಬಲಿ - ETV Bharath Kannada news

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿರುವ ಪ್ರಕರಣ ವರದಿಯಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

two-minor-girls-gang-raped-in-odisha
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ
author img

By

Published : Jan 18, 2023, 8:05 PM IST

ಭುವನೇಶ್ವರ (ಒಡಿಶಾ) : ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ, ಸಂತ್ರಸ್ತೆಯರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಒಡಿಶಾದಲ್ಲಿ ನಡೆದಿದೆ. ಪ್ರತ್ಯೇಕ ಪ್ರಕರಣದಲ್ಲಿ ಗುಜರಾತ್​ನ ರಾಜ್​ಕೋಟ್​ನಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ಒಬ್ಬಳು ಏಕಾಏಕಿ ಮೃತಪಟ್ಟಿರುವುದು ತಿಳಿದು ಬಂದಿದೆ. ಇದಕ್ಕೆ ಪೋಷಕರು ಶಾಲೆಗೆ ಸ್ವೆಟರ್​ ಹಾಕಲು ಶಾಲಾ ಆಡಳಿತ ಮಂಡಳಿ ಅವಕಾಶ ನೀಡದಿರುವುದೇ ಕಾರಣ ಎಂದು ದೂರಿದ್ದಾರೆ.

ಅತ್ಯಾಚಾರ ಪ್ರಕರಣ: ಪಾಟಿಯಾ ರೈಲು ನಿಲ್ದಾಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಎರಡು ಜನ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಸೋಮವಾರ ನಡೆದಿದೆ. ಮಂಗಳವಾರ ಅವರ ಪೋಷಕರು ರೈಲ್ವೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿ ಕುಶುನ ಚಂದ್ರ ಮಲ್ಲಿಕಾ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪಾಟಿಯಾ ಪ್ರದೇಶದಲ್ಲಿ ವಾಸವಾಗಿದ್ದ ಇಬ್ಬರು 12 ಮತ್ತು 14ವರ್ಷದ ಯುವತಿಯರು ಸೋಮವಾರ ಸಂಜೆ ಪಾಟಿಯಾ ರೈಲು ನಿಲ್ದಾಣಕ್ಕೆ ಹೋಗಿದ್ದಾರೆ. ಈ ವೇಳೆ, ಇಬ್ಬರು ಹುಡುಗರು ಅವರನ್ನು ಅಪಹರಿಸಿ ರೈಲ್ವೆ ಮೇಲ್ಸೇತುವೆಗೆ ಕರೆದೊಯ್ದಿದು ಹಗ್ಗದಿಂದ ಕಟ್ಟಿ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಇತರರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮಂಗಳವಾರ ಬೆಳಗ್ಗೆ ಬಿಡುಗಡೆಗೊಂಡ ಬಾಲಕಿಯರು ಮನೆಗೆ ಬಂದ ಬಳಿಕ ತಮ್ಮ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ಇದನ್ನು ತಿಳಿದ ಆರೋಪಿಗಳು ಸಂಸ್ರಸ್ತೆಯರ ಮನೆಗೆ ಬಂದು ಸಂಧಾನಕ್ಕೆ ಪ್ರಯತ್ನಿಸಿದ್ದಾರೆ ಮತ್ತು ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕುವಂತೆ ಬೆದರಿಸಿದ್ದಾರೆ. ಆದರೆ, ಸಂತ್ರಸ್ತ ಬಾಲಕಿಯರ ಕುಟುಂಬಸ್ಥರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ವಿದ್ಯಾರ್ಥಿನಿ ಸಾವು: ರಾಜ್‌ಕೋಟ್ (ಗುಜರಾತ್​): ಗುಜರಾತ್​ನಲ್ಲಿ ನಡೆದ ಘಟನೆಯೊಂದರಲ್ಲಿ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ವರದಿಯಾಗಿದೆ. ದೇಶದಾದ್ಯಂತ ಅಲ್ಲಲ್ಲಿ ಪುಟ್ಟ ಮಕ್ಕಳು ಹೃದಯದ ಸಮಸ್ಯೆ ಬಳಲುತ್ತಿದ್ದಾರೆ. ಗುಜರಾತ್​ನ ರಾಜ್​ ಕೋಟ್​ನಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಒಬ್ಬಳು ಶಾಲೆಗೆ ತಲುಪಿದಾಗ ಏಕಾಏಕಿ ಮೃತಪಟ್ಟಿರುವುದು ವರದಿಯಾಗಿದೆ.

ರಾಜ್‌ಕೋಟ್‌ನ ಗೊಂಡಲ್ ರಸ್ತೆಯಲ್ಲಿರುವ ಜಸಾನಿ ಶಾಲೆಯಲ್ಲಿ ಓದುತ್ತಿದ್ದ 8 ನೇ ತರಗತಿ ವಿದ್ಯಾರ್ಥಿನಿ ಮಂಗಳವಾರ ಬೆಳಗ್ಗೆ ಶಾಲೆಗೆ ತಲುಪಿದ ಕೂಡಲೇ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಚಿಕಿತ್ಸೆಗಾಗಿ ಪಂಡಿತ್ ದೀನದಯಾಳ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿನ ವೈದ್ಯರು ವಿದ್ಯಾರ್ಥಿನಿ ಆಸ್ಪತ್ರೆಗೆ ಬರುವ ಮೊದಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ನನ್ನ ಮಗಳಿಗೆ ಯಾವುದೇ ಕಾಯಿಲೆ ಇಲ್ಲ, ಅವಳು ಶಾಲೆಗೆ ಹೋಗುವ ಮುನ್ನ ಆರೋಗ್ಯವಾಗಿಯೇ ಇದ್ದಳು. ಚಳಿ ಹೆಚ್ಚಿದ್ದರೂ ಶಾಲಾ ಸಮವಸ್ತ್ರದ ಮೇಲೆ ಸ್ವೆಟರ್​ ಧರಿಸಲು ಆಡಳಿತ ಮಂಡಳಿ ಅವಕಾಶ ಕೊಟ್ಟಿಲ್ಲ. ಇದರಿಂದಾಗಿ ಮಗಳ ಸಾವು ಸಂಭವಿಸಿದೆ ಎಂದು ವಿದ್ಯಾರ್ಥಿನಿಯ ತಾಯಿ ಆರೋಪಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯಿಂದ ವರದಿ ಪಡೆದುಕೊಂಡಿತ್ತು. ಶಾಲಾ ಸಮವಸ್ತ್ರದ ಹೊರತಾಗಿ ಹೆಚ್ಚುವರಿ ಸ್ವೆಟರ್‌ಗಳನ್ನು ಧರಿಸುವುದನ್ನು ಯಾವುದೇ ಶಾಲೆ ತಡೆಯಲು ಸಾಧ್ಯವಿಲ್ಲ ಎಂದು ರಾಜ್‌ಕೋಟ್ ಜಿಲ್ಲಾ ಶಿಕ್ಷಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಸಲ್ಲಿಸಿದ ನಂತರ ಸಾವಿನ ಕಾರಣ ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಯಲಹಂಕದಲ್ಲಿ ಯುವತಿಯ ಬರ್ಬರ ಹತ್ಯೆ: ಮದುವೆಯಾಗಲು ನಿರಾಕರಿಸಿದ್ದಕ್ಕೆ ಚೂರಿ ಇರಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.