ETV Bharat / bharat

ದಿಢೀರ್​ ಕುಸಿದ ಕಟ್ಟಡ.. ಇಬ್ಬರು ಬಾಲಕರು ದುರ್ಮರಣ - building collapse in TN

Building collapse in TN: ಹಳೆಯ ಕಾಲದ ಕಟ್ಟಡವೊಂದು ದಿಢೀರ್​ ಆಗಿ ಕುಸಿತಗೊಂಡಿರುವ ಕಾರಣ, ಇಬ್ಬರು ಬಾಲಕರು ದುರ್ಮರಣಕ್ಕೀಡಾಗಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.

Building collapse in TN
Building collapse in TN
author img

By

Published : Jan 27, 2022, 7:33 PM IST

ಕಡಲೂರು (ತಮಿಳುನಾಡು): ಮೂವರು ಬಾಲಕರು ಆಟವಾಡ್ತಿದ್ದ ಸಂದರ್ಭದಲ್ಲಿ ಹಳೇ ಕಾಲದ ಕಟ್ಟಡವೊಂದು ದಿಢೀರ್​ ಆಗಿ ಕುಸಿತಗೊಂಡಿದ್ದು, ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ತಮಿಳುನಾಡಿನ ಹಳೇ ರಾಮಪುರಂ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿ ಮತ್ತು ಗೋಡೆ ಹಠಾತ್​ ಆಗಿ ಕುಸಿತಗೊಂಡಿದೆ. ಈ ವೇಳೆ ಪಕ್ಕದಲ್ಲೇ ಆಟವಾಡುತ್ತಿದ್ದ ಮಕ್ಕಳು ಅವಶೇಷಗಳಡಿ ಸಿಲುಕಿಕೊಂಡಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ 8 ಮತ್ತು 13 ವರ್ಷದ ಬಾಲಕರು ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿರಿ: ಕಿಚ್ಚನ ಅಭಿಮಾನಿಗಳಿಗೆ ನಿರಾಸೆ: 'ವಿಕ್ರಾಂತ್ ರೋಣ' ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವನನ್ನು ಅವಶೇಷಗಳಿಂದ ಹೊರತೆಗೆದು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್​, ಮೃತ ಬಾಲಕರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಗೊಂಡಿರುವ ಬಾಲಕನ ಚಿಕಿತ್ಸೆಗಾಗಿ 50 ಸಾವಿರ ರೂ. ನೀಡುವುದಾಗಿ ತಿಳಿಸಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.